ನಿಗಮ ಮಂಡಳಿಯಲ್ಲಿ ಚಿತ್ರದುರ್ಗಕ್ಕೆ ಸಿಂಹಪಾಲು | ಜಿಲ್ಲೆಯ ಆರು ಮಂದಿಯ ಕೈ ಹಿಡಿದ ನಿಗಮ, ಪ್ರಾಧಿಕಾರ
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.29 : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನೇಮಕ ಮಾಡುವ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ಈ ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಐದು ಮಂದಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಮತ್ತು ಒಬ್ಬರಿಗೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ.
1) ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ
ಜಿ. ಎಸ್. ಮಂಜುನಾಥ್ ಅವರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಪಾಧ್ಯಕ್ಷ ಸ್ಥಾನ.
2) ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ತಾಜ್ ಪೀರ್ ಅವರಿಗೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನ
3) ಚಿತ್ರದುರ್ಗದ ಮೆಹಬೂಬ್ ಪಾಷಾ (ಸಿ.ಕೆ.ಜಾಫರ್ ಷರೀಫ್ ಅವರ ಅಳಿಯ) ಅವರಿಗೆ ಕಂಠೀರವ ಸ್ಟುಡಿಯೋ ಅಧ್ಯಕ್ಷ ಸ್ಥಾನ.
4) ಹೊಳಲ್ಕೆರೆಯ ಮಾಜಿ ಜಿ.ಪಂ.ಸದಸ್ಯೆ ಸವಿತಾ ರಘು ಅವರಿಗೆ ಕರ್ನಾಟಕ ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
5) ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಜಿ.ಪಂ. ಸದಸ್ಯ ಯೋಗೇಶ್ ಬಾಬು ಅವರಿಗೆ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಸ್ಥಾನ. ಮತ್ತು
6) ಬಳ್ಳಾರಿ ಮೂಲದ ಮೊಳಕಾಲ್ಮೂರು ಕ್ಷೇತ್ರದ ಮಾಜಿ ಜಿ.ಪಂ. ಸದಸ್ಯ ಮುಂಡರಗಿ ನಾಗರಾಜ್ ಅವರಿಗೆ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಇದಕ್ಕೂ ಮೊದಲು ನಿಗಮ ಮಂಡಳಿ ಪಟ್ಟಿಯಲ್ಲಿ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಲಾಗಿತ್ತು. ಒಟ್ಟಾರೆಯಾಗಿ ಚಿತ್ರದುರ್ಗ ಜಿಲ್ಲೆಯ ಎಂಟು ಮಂದಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಲಭಿಸಿರುವುದು ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಗೊಳಿಸಿದೆ.