Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

05:17 PM Jun 21, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 21 : ಸರ್ವ ರೋಗ ನಿವಾರಣೆಗೂ ಯೋಗ ರಾಮಬಾಣವಿದ್ದಂತೆ ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಹೇಳಿದರು.

Advertisement

ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಗಾಟಿಸಿ ಮಾತನಾಡಿದರು.

ಯೋಗ ಜೂ.21 ಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿದಿನವೂ ಸ್ವಲ್ಪ ಸಮಯವನ್ನು ಯೋಗಕ್ಕೆ ಮೀಸಲಿಟ್ಟಾಗ ಮಾತ್ರ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಯೋಗ, ಧ್ಯಾನ, ಪ್ರಾಣಾಯಾಮದ ಮಹತ್ವವನ್ನು ತಿಳಿಸಬೇಕು. ವಿಜ್ಞಾನ-ತಂತ್ರಜ್ಞಾನದಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಎಲ್ಲರಿಗೂ ಯೋಗ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಸಂಸ್ಥೆಯ ಮುಖ್ಯಸ್ಥರಾದ ಮೇಘನ ಚೇತನ್, ದೈಹಿಕ ಶಿಕ್ಷಕ ಕೆ.ಎಂ.ಮಲ್ಲಿಕಾರ್ಜುನ್, ಯೋಗಪಟು ಸುನಿಲ್‍ಕುಮಾರ್, ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
Bapuji Public SchoolbengaluruchitradurgaInternational Yoga Day Celebrationsuddionesuddione newsಅಂತರಾಷ್ಟ್ರೀಯ ಯೋಗ ದಿನಾಚರಣೆಚಿತ್ರದುರ್ಗಬಾಪೂಜಿ ಪಬ್ಲಿಕ್ ಶಾಲೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article