Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನೆರವೇರಿದ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮ

01:46 PM Dec 23, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ. 23 : ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಡಿಸೆಂಬರ್ 22ರ ಭಾನುವಾರ ಚಿತ್ರದುರ್ಗದ ನಗರದ ಜನತೆಗೆ ವಿಶೇಷ ಮಹಾ ಅನ್ನದಾನದ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿತ್ತು.

Advertisement

ವಿಶೇಷ ಮಹಾ ಅನ್ನದಾನದ ಕಾರ್ಯಕ್ರಮದ ಉದ್ಘಾಟನೆಯನ್ನು ಮೆದೇಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕೆ.ಎನ್. ಕಾವ್ಯ ವಿಜಯಕುಮಾರ್, ವರ್ತಕರಾದ ಉದಯಶೆಟ್ಟಿ, ಸತೀಶ್ ವೈದ್ಯರಾದ ಹನುಮಂತರೆಡ್ಡಿ, ಮಾಜಿ ಅಧ್ಯಕ್ಷರಾದ ಉಜ್ಜಿನಿ ಸ್ವಾಮಿ ನೇರವೇರಿಸಿದರು. ಅಧ್ಯಕ್ಷತೆಯನ್ನು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಶರಣ್ ಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರದುರ್ಗದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು.

13-01-2025 ಸೋಮವಾರ ಸಂಜೆ 6ಕ್ಕೆ ಶ್ರೀ ಅಯ್ಯಪ್ಪ ಸ್ವಾಮಿಯ ದೇವರ ಆಭರಣ ಮೆರವಣಿಗೆ ನೀಲಕಂಠೇಶ್ವರ ದೇವಸ್ಥಾನದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮುಖಾಂತರ ಶ್ರೀ ಸನ್ನಿಧಾನವನ್ನು ತಲುಪುವುದು.

ದಿನಾಂಕ 14.01.2025 ಮಂಗಳವಾರ ಸಂಜೆ ಮಕರ ಸಂಕ್ರಮಣದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ನೆರವೇರಿಸಲಾಗುವುದು. ಈ ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಚಿತ್ರದುರ್ಗದ ಸಕಲ ಭಕ್ತಾದಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದ್ದಾರೆ.

ಈ ಸಮಯದಲ್ಲಿ ದೇವಸ್ಥಾನದ ಕಾರ್ಯದರ್ಶಿಯಾದ ವೆಂಕಟೇಶ್ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಹಾಗೂ ದೇವಸ್ಥಾನದ ನಿರ್ದೇಶಕರು ಉಪಸ್ಥಿತರಿದ್ದರು.

Advertisement
Tags :
bengaluruchitradurgakannadaKannadaNewsLaksa DipotsavaSri Ayyappa Swamy Templesuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬೆಂಗಳೂರುಲಕ್ಷ ದೀಪೋತ್ಸವ ಕಾರ್ಯಕ್ರಮಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article