Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಸಾವು : ಸೂಕ್ತ ತನಿಖೆಗೆ ಕರುನಾಡ ವಿಜಯಸೇನೆ ಒತ್ತಾಯ

06:01 PM Aug 14, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್.14  : ಹೊರವಲಯದ ತಮಟಕಲ್ಲು ರಸ್ತೆ, ಹೊಸ ಬೈಪಾಸ್‍ನಲ್ಲಿ ಅಪಘಾತಕ್ಕೀಡಾಗಿ ಚಿರತೆ ಸಾವನ್ನಪ್ಪಿದೆ ಎಂದು ಮಾಧ್ಯಮಗಳಲ್ಲಿ ಬಿತ್ತರವಾಗಿದೆ. ಆದರೆ ಇದು ಅಕ್ರಮ ಗಣಿಗಾರಿಕೆ, ಕಲ್ಲು ಬ್ಲಾಸ್ಟಿಂಗ್‍ನಿಂದ ಮೃತಪಟ್ಟಿದೆ ಎಂಬ ಅನುಮಾನವಿದ್ದು, ಸೂಕ್ತ ತನಿಖೆ ನಡೆಸುವಂತೆ ಅರಣ್ಯ ಇಲಾಖೆ ಎದುರು ಕರುನಾಡ ವಿಜಯಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ವಲಯ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

ಇದೇ ಸ್ಥಳದಲ್ಲಿ ಎರಡು ಮೂರು ಚಿರತೆ ಅಪಘಾತಗಳಿಂದ ಸಾವನ್ನಪಿವೆ. ಇಲ್ಲಿ ನಡೆಯುವ ಕಲ್ಲು ಬ್ಲಾಸ್ಟಿಂಗ್‍ಗೆ ಹೆದರಿ ಓಡುವ ಚಿರತೆಗಳು ಹೆದ್ದಾರಿಯಲ್ಲಿ ವಾಹನಗಳಿಗೆ ಸಿಲುಕಿ ಸಾವನ್ನಪ್ಪಬಹುದು. ಆದರೆ ಈಗ ಸತ್ತಿರುವ ಚಿರತೆ ಅಪಘಾತದಿಂದಲ್ಲ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಹಾಗಾಗಿ ಸೂಕ್ತ ತನಿಖೆ ನಡೆಸಿ ವನ್ಯ ಜೀವಿಗಳ ಪ್ರಾಣ ಉಳಿಸಬೇಕು. ಅಕ್ರಮ ಗಣಿಗಾರಿಕೆ ವಿರುದ್ದ ಇದುವರೆವಿಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿ. ಕೂಡಲೆ ಗಣಿಗಾರಿಕೆ ಪರವಾನಗಿಯನ್ನು ರದ್ದುಪಡಿಸಬೇಕು. ಬಂಡಿಪುರ, ನಾಗರಹೊಳೆ ಅರಣ್ಯ ಪ್ರದೇಶಗಳಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಯಾವುದೇ ವಾಹನಗಳು ಸಂಚರಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರೀತಿಯಲ್ಲಿ ಈ ಭಾಗದಲ್ಲೂ ಸಹ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿ ವಿದ್ಯುತ್ ದೀಪದ ವ್ಯವಸ್ಥೆ ಹಾಗೂ ಸುತ್ತಮುತ್ತಲು ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಪ್ರತಿಭಟನೆ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

Advertisement

ಮಹಿಳಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ರಾಜ್ಯ ಸಮಿತಿ ಸದಸ್ಯ ನಿಸಾರ್‍ಅಹಮದ್, ಉಪಾಧ್ಯಕ್ಷ ಮುಜಾಹಿದ್, ನಗರಾಧ್ಯಕ್ಷ ಅವಿನಾಶ್, ಯುವ ಘಟಕದ ಅಧ್ಯಕ್ಷ ನಾಗರಾಜ್ ಮುತ್ತು, ಸಂಚಾಲಕ ನಾಗೇಶ್, ರಾಜಣ್ಣ, ಮಧುಸೂದನ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಖಿಲೇಶ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
bengaluruchitradurgadeathKarunada Vijaysenaleopardnational highwaysuddionesuddione newsಒತ್ತಾಯ Chitradurgaಕರುನಾಡ ವಿಜಯಸೇನೆಚಿತ್ರದುರ್ಗಚಿರತೆ ಸಾವುತನಿಖೆಬೆಂಗಳೂರುರಾಷ್ಟ್ರೀಯ ಹೆದ್ದಾರಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article