For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ರವರನ್ನು ಬಹುಮತಗಳಿಂದ ಗೆಲ್ಲಿಸಿ : ಕೆ. ಪುಟ್ಟಸ್ವಾಮಿ ಗೌಡ

07:32 PM Apr 10, 2024 IST | suddionenews
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ  ಎನ್  ಚಂದ್ರಪ್ಪ ರವರನ್ನು ಬಹುಮತಗಳಿಂದ ಗೆಲ್ಲಿಸಿ   ಕೆ  ಪುಟ್ಟಸ್ವಾಮಿ ಗೌಡ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 10 : ರಾಮ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕೋಮುವಾದಿ ಬಿಜೆಪಿ ಯನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಕೆಂದ್ರದಲ್ಲಿ ಅಧಿಕಾರಕ್ಕೆ ತರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಕೆ. ಪುಟ್ಟಸ್ವಾಮಿ ಗೌಡ ಕರೆ ನೀಡಿದರು.

Advertisement

ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ವತಿಯಿಂದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಮಿಕರ ಹಾಗೂ ಕಾರ್ಯಕರ್ತರ ಪೂರ್ವಬಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

10 ವರ್ಷಗಳ ಕಾಲ ದೇಶದಲ್ಲಿ ಅಧಿಕಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕಾರ್ಮಿಕರ ಪರವಾಗಿರುವ ಕಾನೂನುಗಳನ್ನೆಲ್ಲಾ ರದ್ದು ಪಡಿಸಿ ಬಡವರು, ರೈತರು, ಕಾರ್ಮಿಕರು, ಜನಸಾಮಾನ್ಯರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ, ಗರೀಭಿ ಹಠಾವೋ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕಿದೆ.

ಈ ನಿಟ್ಟಿನಲ್ಲಿ ಕಾರ್ಮಿಕ ವಿಭಾಗದ ಕಾರ್ಯಕರ್ತರು ಪ್ರತಿ ವಾರ್ಡ್ ಹಾಗೂ ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ರವರನ್ನು ಬಹುಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾವಿರ ಸುಳ್ಳು ಹೇಳಿದ್ದಾರೆ, ಅದಾನಿ, ಅಂಬಾನಿ ಸೇರಿದಂತೆ ಉದ್ಯಮಿಗಳ 167 ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಬಿಜೆಪಿ. ಗೆ ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ರೈತರ ಸಮಸ್ಯೆಗಳು ಕಣ್ಣಿಗೆ ಕಾಣುತ್ತಿಲ್ಲವೆ ಎಂದು ಪ್ರಶ್ನಿಸಿದ ಕೆ. ಪುಟ್ಟಸ್ವಾಮಿ ಗೌಡ ಆಪಾದಿಸಿದರು.
ವರ್ಷಕ್ಕೆ 2 ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವುದಾಗಿ ನಂಬಿಸಿ 2ನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಕೊನೆಗೆ ಪಕೋಡ ಮಾರಿ ಎಂದು ಯುವಕರನ್ನು ಈಯಾಳಿಸಿದರು, ಕೋವಿಡ್‍ನಲ್ಲಿ ಕೋಟಿಗಟ್ಟಲೆ ಹಣ ಲೂಟಿ ಹೊಡೆದ ಬಿಜೆಪಿ. ಯನ್ನು ಈಬಾರಿಯ ಚುನಾವಣೆಯಲ್ಲಿ ತಲೆಯೆತ್ತಲು ಬಿಡಬಾರದು, ರಾಜ್ಯದಲ್ಲಿ 1 ಕೋಟಿ 74 ಲಕ್ಷ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2000 ಹಣ ಸಿಗುತ್ತಿದೆ, ದೇಶಕ್ಕೆ ಭದ್ರ ಬುನಾದಿ ಹಾಕುವ ಶಕ್ತಿ ನಿಮ್ಮ ಕೈಯಲ್ಲಿರುವುದರಿಂದ ಅಮೂಲ್ಯವಾದ ಮತವನ್ನು ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರುವಂತೆ ವಿನಂತಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಕೆ. ತಾಜ್‍ಪೀರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಚೋಟು ಸೇರಿದಂತೆ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

Tags :
Advertisement