Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರ : ಮಾ.30ರಂದು ಒಬ್ಬರು ನಾಮಪತ್ರ ಸಲ್ಲಿಕೆ

05:56 PM Mar 30, 2024 IST | suddionenews
Advertisement

ಚಿತ್ರದುರ್ಗ. ಮಾ.30:  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಮಾರ್ಚ್ 30ರಂದು ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಸುಜಾತ ಡಿ. ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಸಾರ್ವತ್ರಿಕ ರಜಾದಿನ ಹೊರತುಪಡಿಸಿ, ಪ್ರತಿ ದಿನ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ ಮಾಡಲಾಗುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

Advertisement

Advertisement
Tags :
chitradurgaChitradurga Lok Sabha Constituencyfile nominationLok Sabha constituencyಚಿತ್ರದುರ್ಗಚಿತ್ರದುರ್ಗ ಲೋಕಸಭಾ ಕ್ಷೇತ್ರನಾಮಪತ್ರ ಸಲ್ಲಿಕೆ
Advertisement
Next Article