For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಲೋಕಸಭಾ ಚುನಾವಣೆ | ಸ್ಥಳೀಯರಿಗೆ ಟಿಕೆಟ್ ನೀಡಿ :  ಶ್ರೀ ಬಸವನಾಗಿದೇವ ಸ್ವಾಮೀಜಿ

07:28 PM Mar 22, 2024 IST | suddionenews
ಚಿತ್ರದುರ್ಗ ಲೋಕಸಭಾ ಚುನಾವಣೆ   ಸ್ಥಳೀಯರಿಗೆ ಟಿಕೆಟ್ ನೀಡಿ    ಶ್ರೀ ಬಸವನಾಗಿದೇವ ಸ್ವಾಮೀಜಿ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ ಮಾ. 22 : ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆದರೂ ಚಿತ್ರದುರ್ಗ ಲೋಕಸಭಾ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಸ್ಥಳೀಯರಿಗೆ ಆದ್ಯತೆ ಮೇರೆಗೆ ಟಿಕೆಟ್ ನೀಡಬೇಕು ಎಂದು ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶರಣರು ಎರಡು ರಾಷ್ಟ್ರೀಯ ಪಕ್ಷಗಳ ಮುಖಂಡರನ್ನು ಒತ್ತಾಯಿಸಿದರು.

Advertisement
Advertisement

ಚಿತ್ರದುರ್ಗದ ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶರಣರ 50ನೆಯ ಜನ್ಮದಿನದ ಅಂಗವಾಗಿ ಸಮಾಜದ ಮುಖಂಡರು ಭಾಗವಹಿಸಿ ಸ್ವಾಮೀಜಿ ಅವರಿಗೆ ಶುಭಕೋರಿದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಸವನಾಗಿದೇವ ಶರಣರು, ಚಿತ್ರದುರ್ಗ ಲೋಕಸಭಾ  ಚುನಾವಣೆಯ ಮೂಲಕ ದೇಶದಲ್ಲಿ ಉತ್ಕೃಷ್ಟ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು, ಪ್ರಜಾಪ್ರಭುತ್ವ ಬಲಗೊಳಿಸಲು ಅರ್ಹರೆಲ್ಲರೂ ತಪ್ಪದೆ ಮತ ಚಲಾಯಿಸಿ ಎಂದು ಸಲಹೆ ನೀಡಿ ಚುನಾವಣೆ ಎಂಬುದು ಸಂವಿಧಾನ ನೀಡಿರುವ ಉತ್ಸವ. ಈ ಹಬ್ಬದಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ತುಂಬಾ ಅಗತ್ಯವಿದೆ ಎಂದರು.

ಮಹಿಳೆಯರಿಗೆ ಆದ್ಯತೆ ನೀಡಿ ಪ್ರಧಾನಿ ನರೇಂದ್ರಮೋದಿ ಅವರು ಶೇ 33ರಷ್ಟು ಮಹಿಳೆಯರಿಗೆ ಮೀಸಲಾತಿ ಘೋಷಿಸಿದ್ದಾರೆ. ಆದರೂ ಟಿಕೆಟ್ ಹಂಚಿಕೆಯಲ್ಲಿ ಸ್ತ್ರೀಯರಿಗೆ ರಾಜ್ಯದಲ್ಲಿ ಆದ್ಯತೆ ನೀಡಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ರಾಷ್ಟ್ರೀಯ ಪಕ್ಷಗಳು ಪ್ರಾಮುಖ್ಯತೆ ನೀಡಬೇಕು. ಬಿಜೆಪಿಯಿಂದ ಭಾರ್ಗವಿ ದ್ರಾವಿಡ್ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕು .ರಾಜ್ಯದಿಂದ ಪರಿಶಿಷ್ಟ ಜಾತಿಯ  ಏಕೈಕ ಮಹಿಳೆ ಟಿಕೆಟ್ ಕೇಳಿದ್ದು ಇವರಿಗೆ ಟಿಕೆಟ್ ಕೊಡಬೇಕೆಂದು  ಸ್ವಾಮೀಜಿ ಒತ್ತಾಯಿಸಿದರು.

ಗುರುಪೀಠ ಸ್ಥಾಪನೆಯಾಗಿ 22 ವರ್ಷ ಪೂರೈಸಿದ್ದು, 2027ಕ್ಕೆ ಬೆಳ್ಳಿ ಮಹೋತ್ಸವ ಆಚರಿಸಲು ಈಗಿನಿಂದಲೇ ಸಿದ್ಧತೆಯಲ್ಲಿ ತೊಡಗಿದ್ದೇವೆ. ಇದಕ್ಕೆ ಸಮುದಾಯದವರು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಗೋಷ್ಟಿಯಲ್ಲಿ ಮುಖಂಡರಾದ ಜಿಲ್ಲಾ ಛಲವಾದಿ ಮಹಾಸಭಾ ಅದ್ಯಕ್ಷ ಹೆಚ್.ಶೇಷಪ್ಪ. ಹನುಮಪ್ಪ. ಹೊಳಲ್ಕೆರೆ ಲಿಂಗಪ್ಪ. ಭರಮಸಾಗರ ಸತ್ಯಪ್ಪ.ಸುವರ್ಣಮ್ಮ.ನರಸಿಂಹಮೂರ್ತಿ. ಛಲವಾದಿ ತಿಪ್ಪೇಸ್ವಾಮಿ. ಇತರರಿದ್ದರು.

Advertisement
Tags :
Advertisement