For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.03ರಂದು ಆರು ನಾಮಪತ್ರ ಸಲ್ಲಿಕೆ

06:47 PM Apr 03, 2024 IST | suddionenews
ಚಿತ್ರದುರ್ಗ ಲೋಕಸಭಾ ಚುನಾವಣೆ  ಏ 03ರಂದು ಆರು ನಾಮಪತ್ರ ಸಲ್ಲಿಕೆ
Advertisement

ಚಿತ್ರದುರ್ಗ. ಏ.03: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 03 ಬುಧವಾರದಂದು ಆರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.

Advertisement
Advertisement

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಾರ್ವತ್ರಿಕ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ದೇವರಾಜ ಟಿ, ಕೆ.ನರಸಿಂಹಮೂರ್ತಿ, ಕೃಷ್ಣಮೂರ್ತಿ, ರಘುಕುಮಾರ್ ಎಸ್, ಕರುನಾಡ ಸೇವಕ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಅಭ್ಯರ್ಥಿಯಾಗಿ ಬಿ.ಟಿ.ರಾಮಸುಬ್ಬಯ್ಯ ಅವರು ಉಮೇದುವಾರಿಕೆ ಸಲ್ಲಿಸಿದರು.

Advertisement

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು  11 ಅಭ್ಯರ್ಥಿಗಳಿಂದ 14 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

Advertisement
Advertisement

Advertisement
Tags :
Advertisement