Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ : ಏಪ್ರಿಲ್ 13 ರಿಂದ 16 ರವರೆಗೆ ಮನೆಯಿಂದ ಮತದಾನಕ್ಕೆ ಅವಕಾಶ

04:26 PM Apr 10, 2024 IST | suddionenews
Advertisement

 

Advertisement

ಚಿತ್ರದುರ್ಗ, ಏ.10: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ. 13 ರಿಂದ 16 ರವರೆಗೆ, 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನ ಮತದಾರರು ಮನೆಯಿಂದ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಚಿತ್ರದುರ್ಗ, ಮೊಳಕಾಲ್ಮೂರು, ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ರಿಯಲ್ಲಿ ಏಪ್ರಿಲ್ 13 ರಿಂದ 15ರ ವರೆಗೆ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ರಿಯಲ್ಲಿ ಏಪ್ರಿಲ್ 13 ರಿಂದ 14ರ ವರೆಗೆ, ಚೆಳ್ಳಕೆರೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರ ವ್ಯಾಪ್ರಿಯಲ್ಲಿ ಏಪ್ರಿಲ್ 13 ರಿಂದ 16ರ ವರೆಗೆ, ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮನೆಯಿಂದ ಮತದಾನ ಕಾರ್ಯ ನಡೆಯಲಿದೆ.

Advertisement

ಈಗಾಗಲೇ ವಿಧಾನ ಸಭಾ ಕ್ಷೇತ್ರವಾರು ಸಹಾಯಕ ಚುನಾವಣಾಧಿಕಾರಿಗಳು 85 ವರ್ಷ ಮೇಲ್ಪಪ್ಟವರಿಗೆ ಹಾಗೂ ವಿಶೇಷ ಚೇತನರಿಗೆ ಫಾರಂ 12 ಡಿ ವಿತರಿಸಿ ಮನೆಯಿಂದ ಮತದಾನ ಮಾಡುವವರ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಇದನ್ನು ಆಧರಿಸಿ ಮನೆಯಿಂದ ಮತದಾನ ಮಾಡುವುದಕ್ಕೆ ರೂಟ್ ಮ್ಯಾಪ್ ತಯಾರಿಸಲಾಗಿದೆ. ಇದರ ಅನ್ವಯ ಮನೆಯಿಂದ ಮತದಾನ ಕಾರ್ಯ ನಡೆಯಲಿದೆ ಎಂದು ಚುನವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
bengaluruchitradurgaChitradurga Lok Sabha General Electionsuddionesuddione newsvotingಅವಕಾಶಏಪ್ರಿಲ್ಚಿತ್ರದುರ್ಗಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಬೆಂಗಳೂರುಮತದಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article