Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಗಾಂಧಿಜಿ ಹಾಗೂ ಲಾಲ್‍ಬಹದ್ದೂರ್‍ಶಾಸ್ತ್ರಿಯವರ ಜಯಂತಿ ಆಚರಣೆ

05:05 PM Oct 02, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ಸತ್ಯ ಮತ್ತು ಅಹಿಂಸೆಯ ಮೂಲಕ ಮಹಾತ್ಮಾಗಾಂಧಿ ಬ್ರಿಟೀಷರ ವಿರುದ್ದ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

Advertisement

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮಹಾತ್ಮಗಾಂಧಿಜಿ ಹಾಗೂ ಲಾಲ್‍ಬಹದ್ದೂರ್‍ಶಾಸ್ತ್ರಿಯವರ ಜಯಂತಿಯಲ್ಲಿ ಇಬ್ಬರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಸತ್ಯಮೇವ ಜಯತೆ ಎಂಬುದು ಮಹಾತ್ಮಾಗಾಂಧಿಯ ಧ್ಯೇಯವಾಗಿತ್ತು. ಲಾಲ್‍ಬಹದ್ದೂರ್‍ಶಾಸ್ತ್ರಿ ಹಾಗೂ ಗಾಂಧಿಜಿಯವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದರು.

ಅಹಿಂದಾ ನಾಯಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ವಿರೋಧ ಪಕ್ಷದವರು ಷಡ್ಯಂತ್ರ ನಡೆಸುತ್ತಿದ್ದಾರೆ. ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲದಿದ್ದರೂ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಸತ್ಯಕ್ಕೆ ಸೋಲಿಲ್ಲ. ಮುಂದೊಂದು ದಿನ ಜಯ ಸಿಕ್ಕೆ ಸಿಗುತ್ತದೆ ಈಗ ಎದುರಾಗಿರುವ ಸಂಕಷ್ಟ ತಾತ್ಕಾಲಿಕವಷ್ಟೆ ಎಂದು ತಿಳಿಸಿದರು.

ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಮುರಳಿಧರ ಹಾಲಪ್ಪ ಮಾತನಾಡಿ ದೇಶ ಸಂಕಷ್ಟದಲ್ಲಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ರೈತರ ಕರಾಳ ಕಾಯಿದೆ, ನೋಟಿ ಅಮಾನ್ಯೀಕರಣದಿಂದ ಹಿಡಿದು ಜಿ.ಎಸ್.ಟಿ.ವರೆಗೆ ದೇಶದ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಯುವ ಸಮೂಹವನ್ನು ನಂಬಿಸಿ ಪ್ರಧಾನಿಯಾಗಿರುವ ನರೇಂದ್ರಮೋದಿ ಹತ್ತು ವರ್ಷಗಳಲ್ಲಿ ಒಂದು ಉದ್ಯೋಗವನ್ನು ಕೊಟ್ಟಿಲ್ಲ. ಗಾಂಧಿ ಮತ್ತು ಲಾಲ್‍ಬಹುದ್ದೂರ್‍ಶಾಸ್ತ್ರಿ ಇವರುಗಳ ಹೋರಾಟವನ್ನು ಮುಂದುವರೆಸಿಕೊಂಡು ಹೋಗುವ ಮೂಲಕ ಕೋಮುವಾದಿ ಬಿಜೆಪಿ.ಯನ್ನು ತೊಲಗಿಸಿ ದೇಶ ಉಳಿಸಬೇಕಾಗಿದೆ ಎಂದು ಹೇಳಿದರು.

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಕ್ಷೇತ್ರದ ಉಸ್ತುವಾರಿ ರಾಮಕೃಷ್ಣಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್,

ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರುಗಳಾದ ಆರ್.ಕೆ.ಸರ್ದಾರ್, ಬಿ.ಟಿ.ಜಗದೀಶ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ಹನುಮಲಿ ಷಣ್ಮುಖಪ್ಪ, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ

ಎ.ಎಂ.ಇಮಾಮ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಟ ವರ್ಗಗಳ ವಿಭಾಗದ ಅಧ್ಯಕ್ಷ ಮಂಜುನಾಥ್, ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ತಾಲ್ಲೂಕು ಅಧ್ಯಕ್ಷ ಆರ್.ಪ್ರಕಾಶ್, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ಉಪಾಧ್ಯಕ್ಷೆ ಪಿ.ಕೆ.ಪವಿತ್ರ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ನಿವೃತ್ತ ಡಿ.ವೈ.ಎಸ್ಪಿ. ಅಬ್ದುಲ್‍ರೆಹಮಾನ್

ಸೇವಾದಳದ ಇಂದಿರಾ, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇಣುಕಾಶಿವು ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
bengaluruchitradurgaChitradurga|lCongress officeJayanti celebrationLal Bahadur Shastrimahatma gandhisuddionesuddione newsಕಾಂಗ್ರೆಸ್ ಕಚೇರಿ ಮಹಾತ್ಮಗಾಂಧಿಜಿಚಿತ್ರದುರ್ಗಜಯಂತಿ ಆಚರಣೆಬೆಂಗಳೂರುಲಾಲ್‍ಬಹದ್ದೂರ್‍ಶಾಸ್ತ್ರಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article