ಚಿತ್ರದುರ್ಗ | ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಚಾಲನೆ
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾದರೆ ಗ್ರಾಮಗಳು ಸರ್ವತೋಮುಖ ಅಭಿವೃದ್ಧಿಯಾಗುತ್ತವೆ. ಪ್ರತಿ ಗ್ರಾಮದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಕೆ.ಸಿ. ವೀರೇಂದ್ರ ತಿಳಿಸಿದರು.
ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕಾಟಿಹಳ್ಳಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ 25 ಲಕ್ಷ ರೂ ಹಾಗೂ ದೊಡ್ಡ ಸಿದ್ದವನಹಳ್ಳಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಕರಿಯಟ್ಟಿ ಗ್ರಾಮದಲ್ಲಿ ಜಲ್ ಜೀವನ್ ಕುಡಿಯುವ ನೀರಿನ ಯೋಜನೆಯ ಅಡಿಯಲ್ಲಿ ಸುಮಾರು 38 ಲಕ್ಷ ರೂಪಾಯಿ ಕಾಮಗಾರಿ ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ನನ್ನ ಮತಕ್ಷೇತ್ರಕ್ಕೆ ಸಂಬಂಧಪಟ್ಟ ಹಳ್ಳಿಗಳಿಗೆ ಭೇಟಿ ಮಾಡಿ ಅಲ್ಲಿನ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಚರಂಡಿ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವುದಾಗಿ ತಿಳಿಸಿದರು.
2024-25ನೇ ಸಾಲಿನ ರೈತ ಆತ್ಮಹತ್ಯೆ ಪರಿಹಾರ ನಿಧಿಯನ್ನು ಆನಂದಪ್ಪ ಬಿನ್ ಮಲ್ಲಪ್ಪ ವಡ್ಡರಸಿದ್ದವ್ವನಹಳ್ಳಿ, ಹನುಮಂತಪ್ಪ ಬಿನ್ ಮಾರಪ್ಪ, ಕರುರುಬರಹಳ್ಳಿ, ಬಸವರಾಜಪ್ಪ ಬಿನ್ ಲೇಟ್ ಈರಪ್ಪ, ಹುಲ್ಲೂರು ಇವರ ವಾರಸುದಾರರಿಗೆ ಶಾಸಕರು ತಲಾ 5.00 ಲಕ್ಷ ಪರಿಹಾರ ನಿಧಿಯ ಬಿಡುಗಡೆ ಪತ್ರವನ್ನು ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ಚಂದ್ರಕುಮಾರ್, ಸಹಾಯಕ ಕೃಷಿ ನಿರ್ದೇಶಕರು, ಕೆಡಿಪಿ ಸದಸ್ಯರಾದ ನಾಗರಾಜು, ನಂದಿಪುರ ಕಾಂಗ್ರೆಸ್ ಮುಖಂಡರಾದ ಸಿದ್ದೇಶ್, ಕಾಟಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕರಿಯಪ್ಪ, ದೊಡ್ಡ ಸಿದ್ದವನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ದೇವೇಂದ್ರಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.