For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಓಬಣ್ಣನಹಳ್ಳಿ ಗ್ರಾಮಕ್ಕೆ ಸಂಸದ ಗೋವಿಂದ ಎಂ ಕಾರಜೋಳ ಭೇಟಿ : ವಿಶೇಷ ಪ್ಯಾಕೇಜ್ ಭರವಸೆ

05:40 PM Aug 24, 2024 IST | suddionenews
ಚಿತ್ರದುರ್ಗ   ಓಬಣ್ಣನಹಳ್ಳಿ ಗ್ರಾಮಕ್ಕೆ ಸಂಸದ ಗೋವಿಂದ ಎಂ ಕಾರಜೋಳ ಭೇಟಿ   ವಿಶೇಷ ಪ್ಯಾಕೇಜ್ ಭರವಸೆ
Advertisement

ಚಿತ್ರದುರ್ಗ ಆ. 24 : ಕಳೆದ ವಾರ ಸುರಿದ ಹೆಚ್ಚಿನ ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿ ಗ್ರಾಮಕ್ಕೆ ಸಂಸದ ಗೋವಿಂದ ಎಂ ಕಾರಜೋಳ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಸಂತ್ರಸ್ಥರ ಅಹವಾಲು ಆಲಿಸಿದರು.

Advertisement
Advertisement

ತೀವ್ರ ಮಳೆಯಿಂದಾಗಿ ಓಬಣ್ಣನಹಳ್ಳಿ ಗ್ರಾಮದ ಬಹುತೇಕ ಮನೆಗಳು ಹಾನಿಯಾಗಿರುವುದನ್ನು ಕಂಡು ಮರುಕ ವ್ಯಕ್ತಪಡಿಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಗೋವಿಂದ ಎಂ.ಕಾರಜೋಳ ಅವರು, ಓಬಣ್ಣನಹಳ್ಳಿ ಸುತ್ತಮುತ್ತ ಬೆಟ್ಟ ಇದೆ.  ಹೀಗಾಗಿ ಹೆಚ್ಚಿನ ಮಳೆಯಿಂದಾಗಿ, ಬೆಟ್ಟದಿಂದ ಮಳೆನೀರು ಹರಿದು ಇಡೀ ಗ್ರಾಮದ ಮನೆಗಳಿಗೆ ನೀರು ನುಗ್ಗಿ ಅನೇಕ ಮನೆಗಳು ಹಾನಿಗೀಡಾಗಿವೆ. ಮಳೆ ನೀರು ನುಗ್ಗಿದ್ದರಿಂದ ಮನೆಯ ಸಾಮಾಗ್ರಿಗಳು ಹಾನಿಯಾಗಿವೆ. ಈಗಾಗಲೇ ತಹಶೀಲ್ದಾರ್ ಅವರು ಹಾನಿಯಾದ ಮನೆಗಳಿಗೆ ₹ 5 ಸಾವಿರ ತುರ್ತು ಪರಿಹಾರ ನೀಡಿದ್ದಾರೆ ಎಂದು ತಿಳಿಸಿದ ಅವರು, ಗ್ರಾಮದಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳು, ಗುಡಿಸಲುಗಳನ್ನು ಪಟ್ಟಿ ಮಾಡಿ ಮನೆ ನಿರ್ಮಾಣಕ್ಕೆ ಕ್ರಮಕ್ಕೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಮಾಡಿದರು.

Advertisement

ಗ್ರಾಮಕ್ಕೆ ವಿಶೇಷ ಪ್ಯಾಕೇಜ್ ಭರವಸೆ:
ಓಬಣ್ಣನಹಳ್ಳಿ ಗ್ರಾಮಕ್ಕೆ ಎಸ್‍ಸಿಪಿ, ಟಿ ಎಸ್ ಪಿ ಯೋಜನೆ ಅನುದಾನದಲ್ಲಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕೂಡಲೇ ಸಲ್ಲಿಸಿ ವಿಶೇಷ ಪ್ಯಾಕೇಜ್ ನೀಡಲು ಪ್ರಯತ್ನಿಸಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.
ಗ್ರಾಮದಲ್ಲಿ ಲೇ ಔಟ್ ನಿರ್ಮಾಣ:  ಓಬಣ್ಣನಹಳ್ಳಿ ಗ್ರಾಮದ ಕೆಲವರಿಗೆ ನಿವೇಶನದ ಸಮಸ್ಯೆ ಇದ್ದು, ಇದರ ಜೊತೆಗೆ ಹಳ್ಳ ಒತ್ತುವರಿ ಮಾಡಿಕೊಂಡು ಹಲವರು ಮನೆಗಳನ್ನು ನಿರ್ಮಿಸಿದ್ದು, ಅವುಗಳನ್ನು ತೆರವುಗೊಳಿಸಿ, ಗ್ರಾಮದಲ್ಲಿ 3 ಎಕೆರೆ ಗ್ರಾಮಠಾಣಾ ಲಭ್ಯವಿದ್ದು,  ಇದನ್ನು ಲೇ ಔಟ್ ಮಾಡಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ  ಕಾನೂನು ಪ್ರಕಾರ ಹಕ್ಜುಪತ್ರಗಳನ್ನು ನೀಡಿ, ಮನೆ ನಿರ್ಮಾಣಕ್ಕೆ  ಸರ್ಕಾರದಿಂದ ಅನುದಾನ ಕೊಡಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಂಸದರು ಹೇಳಿದರು.

Advertisement

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Tags :
Advertisement