Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ನಗರಸಭೆ ಅಧ್ಯಕ್ಷೆಯಾಗಿ ಸುಮೀತಾ.ಬಿ.ಎನ್ ಹಾಗೂ ಉಪಾಧ್ಯಕ್ಷೆಯಾಗಿ ಶ್ರೀದೇವಿ.ಜಿ.ಎಸ್ ಆಯ್ಕೆ

03:29 PM Aug 26, 2024 IST | suddionenews
Advertisement

ಚಿತ್ರದುರ್ಗ. ಆಗಸ್ಟ್.26: ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಸುಮೀತಾ.ಬಿ.ಎನ್. ಹಾಗೂ ಉಪಾಧ್ಯಕ್ಷರಾಗಿ ಶ್ರೀದೇವಿ.ಜಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಘೋಷಿಸಿದರು.

Advertisement

ಅಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಸುಮೀತಾ.ಬಿ.ಎನ್. ಹಾಗೂ ತಾರಕೇಶ್ವರಿ ಎಸ್.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಶ್ರೀದೇವಿ.ಜಿ.ಎಸ್ ಹಾಗೂ ರೋಹಿಣಿ.ಬಿ.ಎಸ್‌ ನಾಮಪತ್ರ ಸಲ್ಲಿಸಿದ್ದರು.

Advertisement

ಚಿತ್ರದುರ್ಗ ನಗರ ಸಭೆ 35 ಜನ ಚುನಾಯಿತ ಸದಸ್ಯ ಬಲ ಹೊಂದಿದೆ. ಈ ಪೈಕಿ ಓರ್ವ ಸದಸ್ಯರು ಮೃತ ಪಟ್ಟಿದ್ದರಿಂದ ಚುನಾಯಿತ ನಗರ ಸಭೆ ಸದಸ್ಯರ ಬಲ 34ಕ್ಕೆ ಇಳಿಕೆಯಾಗಿತ್ತು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ನಗರ ಸಭೆ ವ್ಯಾಪ್ತಿ ಪ್ರತಿನಿಧಿಸುವ ವಿಧಾನಸಭಾ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಜರಾಗಿದ್ದರು. ಈ ಹಿನ್ನಲೆಯಲ್ಲಿ ಸೋಮವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಒಟ್ಟು 35 ಸದಸ್ಯರು ಮತ ಚಲಾಯಿಸಿದರು. ಈ ಪೈಕಿ ಸುಮೀತಾ.ಬಿ.ಎನ್ ಹಾಗೂ ಶ್ರೀದೇವಿ.ಜಿ.ಎಸ್ ತಲಾ 22 ಮತಗಳನ್ನು ಪಡೆಯುವ ಮೂಲಕ ಅನುಕ್ರಮವಾಗಿ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಗಾದಿಗೆ ಏರಿದ್ದಾರೆ.

ಚುನಾವಣಾ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ನಗರದ ಅಭಿವೃದ್ಧಿಗಾಗಿ ಸದಸ್ಯರು ಸುಮೀತಾ.ಬಿ.ಎನ್ ಅವರನ್ನು ಅಧ್ಯಕ್ಷರಾಗಿ ಹಾಗೂ ಶ್ರೀದೇವಿ.ಜಿ.ಎಸ್ ಉಪಾಧ್ಯಕ್ಷರನ್ನಾಗಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಇವರ ಆಯ್ಕೆ ಸಹರಿಸಿದ ಎಲ್ಲಾ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸಿದರು.

ನೂತನ ಅಧ್ಯಕ್ಷೆ ಸುಮೀತಾ.ಬಿ.ಎನ್. ಮಾತನಾಡಿ ನಗರದ ಸ್ವಚ್ಛತೆ ಹಾಗೂ ಅಭಿವೃದ್ಧಿಗೆ ಒತ್ತು ನೀಡಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.

ನೂತನ ಉಪಾಧ್ಯಕ್ಷೆ ಶ್ರೀದೇವಿ.ಜಿ.ಎಸ್ ಮಾತನಾಡಿ ಶಾಸಕರ ನೇತೃತ್ವದಲ್ಲಿ ವಾರ್ಡ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಮುಂದೆಯೂ ಜನಪ್ರತಿನಿಧಿಗಳ ಸಹಕಾರ ಪಡೆದು ಅಭಿವೃದ್ಧಿ ಕಾರ್ಯ ಮುಂದುವರೆಸುವುದಾಗಿ ತಿಳಿಸಿದರು.ಚುನಾವಣೆಯ ವೇಳೆ ತಹಶೀಲ್ದಾರ್ ಡಾ.ನಾಗವೇಣಿ ಹಾಗೂ ನಗರ ಸಭೆ ಆಯುಕ್ತೆ ರೇಣುಕಾ.ಎಂ ಉಪಸ್ಥಿತರಿದ್ದರು.

Advertisement
Tags :
bengaluruChairpersonchitradurgaChitradurga Municipal CouncilSridevi GSsuddionesuddione newsSunita BNVice Chairpersonಅಧ್ಯಕ್ಷೆಅಭ್ಯರ್ಥಿಗಳ ಆಯ್ಕೆಉಪಾಧ್ಯಕ್ಷೆಚಿತ್ರದುರ್ಗಚಿತ್ರದುರ್ಗ ನಗರಸಭೆಬೆಂಗಳೂರುಶ್ರೀದೇವಿ.ಜಿ.ಎಸ್ಸುದ್ದಿಒನ್ಸುದ್ದಿಒನ್ ನ್ಯೂಸ್ಸುನೀತಾ.ಬಿ.ಎನ್
Advertisement
Next Article