Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಆಗಸ್ಟ್ 26 ರಂದು ಚಿತ್ರದುರ್ಗ ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಚುನಾವಣೆ : ಇಬ್ಬರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆ

06:26 PM Aug 24, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

 

Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಆಗಸ್ಟ್ 26 ರಂದು ನಡೆಯಲಿರುವ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ತೀವ್ರ ಕುತೂಹಲ ಕೆರಳಿಸಿರುವುದರ ನಡುವೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಗರಸಭೆ 29 ನೇ ವಾರ್ಡ್‍ನ ಸದಸ್ಯೆ ಸುಮಿತಾ ರಾಘವೇಂದ್ರ, 24 ನೇ ವಾರ್ಡ್ ಸದಸ್ಯ ದಾವೂದ್ ಇವರುಗಳಿಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಕಾಂಗ್ರೆಸ್ ಭಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡುತ್ತ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿರುವ ನೀವುಗಳು ಇನ್ನು ಮುಂದೆ ಕಾಂಗ್ರೆಸ್ ಕುಟುಂಬದಲ್ಲಿ ಮುಂದುವರೆಯಿರಿ ನಗರಸಭೆಯಲ್ಲಿ ಮುಂದೆ ಅಧಿಕಾರ ಸಿಗಲಿ ಎಂದು ಹಾರೈಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ನಗರಸಭೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್‍ಗೆ ಸಿಗಬೇಕೆಂಬುದು ನಮ್ಮೆಲ್ಲರ ಆಸೆ. ಕಾಂಗ್ರೆಸ್‍ನಿಂದ ಮಾತ್ರ ಎಲ್ಲಾ ಜಾತಿ ಧರ್ಮದವರಿಗೂ ಸಾಮಾಜಿಕ

ನ್ಯಾಯ ನೀಡಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಕೆ.ಡಿ.ಪಿ. ಸದಸ್ಯ ಕೆ.ಸಿ.ನಾಗರಾಜ್, ಕಾಂಗ್ರೆಸ್ ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಸೈಯದ್ ಖುದ್ದೂಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಯು.ಲಕ್ಷ್ಮಿಕಾಂತ್, ಹನೀಸ್, ಪರಮೇಶ್, ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ, ಡಾ.ರಹಮತ್‍ವುಲ್ಲಾ, ಪ್ರಕಾಶ್ ರಾಮನಾಯ್ಕ, ಜಿ.ವಿ.ಮಧುಗೌಡ, ಕರಿಯಪ್ಪ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಚೇರ್ಮನ್ ಡಾ.ಕೆ.ಅನ್ವರ್‍ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಎಂ.ಸಿ.ಓ. ಬಾಬು ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
bengaluruchitradurgaChitradurga Municipal Councilcmc Membersjoin CongressPresident ElectionPresident-Vicesuddionesuddione newsTwo independentಅಧ್ಯಕ್ಷಇಬ್ಬರು ಪಕ್ಷೇತರ ಸದಸ್ಯರುಉಪಾಧ್ಯಕ್ಷಕಾಂಗ್ರೆಸ್ ಸೇರ್ಪಡೆಚಿತ್ರದುರ್ಗಚಿತ್ರದುರ್ಗ ನಗರಸಭೆಚುನಾವಣೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article