ಚಿತ್ರದುರ್ಗ | ಕೇಂದ್ರ ಗೃಹ ಸಚಿವ ಅಮಿತ್‍ಷಾ ಹೇಳಿಕೆ ವಿರೋಧಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಪ್ರತಿಭಟನೆ
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರೇಳುವ ಬದಲು ದೇವರನ್ನು ಜಪಿಸಿದರೆ ಸ್ವರ್ಗ ಸಿಗುತ್ತದೆಂದು ಕೇಂದ್ರ ಗೃಹ ಸಚಿವ ಅಮಿತ್‍ಷಾ ಕೇವಲವಾಗಿ ಮಾತನಾಡಿರುವುದನ್ನು ಖಂಡಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿರುವ ಅಮಿತ್‍ಷಾ ಸಂವಿಧಾನವನ್ನು ಗೌರವಿಸುವುದಿಲ್ಲವೆನ್ನುವುದಾದರೆ ಒಂದು ಕ್ಷಣವೂ ಕೇಂದ್ರ ಸಚಿವರಾಗಿ ಮುಂದುವರೆಯುವ ನೈತಿಕತೆಯಿಲ್ಲ. ಕೂಡಲೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಸಂವಿಧಾನಕ್ಕಿಂತ ದೊಡ್ಡ ಗ್ರಂಥ ನಮ್ಮ ದೇಶಕ್ಕೆ ಮತ್ತೊಂದಿಲ್ಲ. ಅಂತಹ ಪವಿತ್ರವಾದ ಸಂವಿಧಾನಕ್ಕೆ ಅಪಮಾನಗೊಳಿಸಿರುವ ಅಮಿತ್‍ಷಾರನ್ನು ದೌರ್ಜನ್ಯ ಕಾಯಿದೆಯಡಿಯಲ್ಲಿ ಬಂಧಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್ ವಿರೋಧಿಗಳಿಗೆ ಪ್ರಚೋದನೆ ನೀಡಿದಂತಾಗುತ್ತದೆ ಎಂದು ಪ್ರತಿಭಟನಾನಿರತರು ಕಿಡಿಕಾರಿದರು.
ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ರಾಜ್ಯ ಕಾರ್ಯದರ್ಶಿಗಳಾದ ಭೀಮನಕೆರೆ ಶಿವಮೂರ್ತಿ, ದೊಡ್ಡೆಟ್ಟಪ್ಪ, ಲಕ್ಷ್ಮಮ್ಮ, ನವೀದ್, ಸುಂದರೇಶ್, ಮಹಂತೇಶ್ ಕೂನಬೇವು, ಕೆ.ಪಿ.ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷರುಗಳಾದ ಮಹಲಿಂಗಪ್ಪ, ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಹನುಮಂತರಾಯ, ಖಜಾಂಚಿ ಹೆಚ್.ಆರ್.ಶ್ರೀನಿವಾಸ್, ಪಿ.ಜಯಣ್ಣ, ಸತೀಶ್ ಬೂದಿಹಳ್ಳಿ, ಪರಮೇಶ್ವರಪ್ಪ, ಡಿ.ಮೈಲಾರಪ್ಪ, ಬಿ.ಮಂಜುನಾಥ್, ಗೋವಿಂದಪ್ಪ, ಮಂಜುನಾಥ್ ತಾಳಿಕೆರೆ
ಆರ್.ಗಂಗಾಧರಯ್ಯ, ಚಂದ್ರಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.