Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ನಗರದಲ್ಲಿ ಫೆಬ್ರವರಿ 27ರಂದು ವಿದ್ಯುತ್ ವ್ಯತ್ಯಯ

06:00 PM Feb 26, 2024 IST | suddionenews
Advertisement

 

Advertisement

 

ಚಿತ್ರದುರ್ಗ. ಫೆ.26:  ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸ 11 ಕೆ.ವಿ ಬ್ಯಾಂಕ್-4 ಮತ್ತು 2 ಫೀಡರ್‍ಗಳ ಕಾರ್ಯಾರಂಭ ಮತ್ತು ಬ್ಯಾಂಕ್-2 ಮತ್ತು 4ರ 1*1000 sq.mm UG  ಕೇಬಲ್ ಬದಲಾಯಿಸುವ ಕಾಮಗಾರಿಗೆ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಫೆ.27ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Advertisement

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಗೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಗುಡ್ಡದರಂಗವ್ವನ ಹಳ್ಳಿ, ವಿದ್ಯಾನಗರ, ಸೀಬಾರ, ಚಿಕ್ಕಗೊಂಡನಹಳ್ಳಿ, ಜೆ.ಸಿ.ಆರ್, ಚಂದ್ರವಳ್ಳಿ, ಪಿಳ್ಳೆಕೆರನಹಳ್ಳಿ, ಮಿಲ್ಲ್ ಏರಿಯಾ, ಕೆ.ಡಬ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
bengaluruchitradurgacityfebruaryPower outagesuddionesuddione newsಚಿತ್ರದುರ್ಗನಗರಫೆಬ್ರವರಿಬೆಂಗಳೂರುವಿದ್ಯುತ್ ವ್ಯತ್ಯಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article