Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

04:01 PM Feb 16, 2024 IST | suddionenews
Advertisement

 

Advertisement

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ ಫೆ. 16 :  ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು,  ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಮತ್ತು ಓಬಕಿ ಯನ್ನೊಳಗೊಂಡಂತೆ ಎಲ್ಲಾ ಸ್ವರೂಪದ ಖಾಸಗಿಕರಣವನ್ನು ಕೈಬಿಡಬೇಕು. ಸಾರ್ವಜನಿಕ ರಂಗದ ಕೈಗಾರಿಕೂ ಸೇವೆಗಳನ್ನು ಬಲಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿತು.

ನಗರದಲ್ಲಿಂದು ಪ್ರತಿಭಟನೆಯನ್ನು ನಡೆಸಿದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜಿಲ್ಲಾ ಸಮಿತಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಯನ್ನು ಕೂಗಲಾಯಿತು. ಈ ಹಿಂದೆ ಲೋಕಸಭಾ ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 2 ಕೋಟಿ ಉದ್ಯೋಗದ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಡಾ.ಸ್ವಾಮಿನಾಥನ್‍ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ತಿಳಿಸಿದ್ದಿರಿ.ಆದರೆ 'ಸಬಾಕಾ ಸಾಥ್ ಎಂದು ಜನಸಾಮಾನ್ಯರ ಕೊಂಡುಕೊಳ್ಳುವ ಸಾಮಾಥ್ರ್ಯವನ್ನು ಕುಗ್ಗಿಸಿ, ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗೀಕರಿಸಿ, 2700 ಕ್ಯಾಲೋರಿ ಆಹಾರ ಪ್ರತಿದಿನ ಸಿಗದ ಪರಿಣಾಮ ಇಂದು ಭಾರತ ಹಸಿವಿನ ಸೂಚ್ಯಾಂಕದಲ್ಲಿ111ನೇ ಸ್ಥಾನಕ್ಕೆ ಕುಸಿದಿದೆ ಎಂದು ದೂರಿದರು.

ಆರ್ಥಿಕ ಬಿಕ್ಕಟ್ಟನ್ನು ಕರೋನಾ ಮುಂಚಿತವಾಗಿದ್ದ ಬೆಳ ವಣಿಗೆಗೆ ಹೋಲಿಸದೇ ಕರೋನಾ ನಂತರದ ಬೆಳವಣಿಗೆಗೆ ಹೋಲಿಸಿ ಆರ್ಥಿಕ ಬಿಕ್ಕಟ್ಟುಸುಧಾರಿಸಿದೆ ಎಂದು ಹೇಳಲಾಗುತ್ತಿದೆ. ಆರ್ಥಿಕ ಬಿಕ್ಕಟ್ಟು ಸುಧಾರಿಸಿದ್ದರೆ ಕಾರ್ಮಿಕ ಕಾನೂನುಗಳ ತಿದ್ದುಪಡಿ ಮಾಡಿ ಮುಷ್ಕರದ ಹಕ್ಕು ಮತ್ತು ಸಾಮೂಹಿಕ ಚೌಕಾಸಿಯ ಹಕ್ಕನ್ನು ಏಕೆ ಕಸಿಯಲಾಗುತ್ತಿದೆ. ಬಂಡವಾಳ ಹೂಡಿಕೆಯಾಗುತ್ತಿದೆ ಎಂದು ಪ್ರತಿಪಾದನೆ ಮಾಡ ವ ಸರ್ಕಾರ 100ಕ್ಕೆ 60% ಗುತ್ತಿಗೆ-ಹೊರಗುತ್ತಿಗೆಯ ಹುದ್ದೆಗಳನ್ನು ಏಕೆ ಸೃಷ್ಟಿಸಲಾಗುತ್ತಿದೆ? ನಿಮ್ಮ ಈ ಆರ್ಥಿಕ ನೀತಿಗಳಿಂದ ಬಡವರ ಭಾರತ ಮತ್ತು ಶ್ರೀಮಂತರ ಭಾರತವನ್ನು ಸೃಷ್ಟಿಸಿ ದೊಡ್ಡ ಪ್ರಮಾಣದ ಆರ್ಥಿಕ ಅ ಸಮಾನತೆಯ ಕಂದಕವನ್ನು ಸೃಷ್ಟಿಸಿರುವುದು ಸಬ್ ಕಾ ವಿಕಾಸ ? ಎನ್ನುವುದು ಘೋಷಣೆಯಲ್ಲವೇ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.

ದೇಶಕ್ಕೆ ಅನ್ನ ನೀಡುವ ರೈತ ಬೆಳೆದ ಬೆಳೆಗಳಿಗೆ ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಬೆಂಬಲ ಬೆಲೆಗೆ ಕಾನೂನು ತರುವ ಬದಲು ರೈತನನ್ನು ಬಲಿ ತೆಗೆದು ಕೊಳ್ಳುವ ನೀತಿ ಸರಿಯೇ?ಕೋಮುಭಾವನೆಗಳನ್ನು ಪ್ರಚೋದನೆಗೊಳಿಸಿ ಜನರನ್ನು ಧಾರ್ಮಿಕವಾಗಿ ಕಿತ್ತಾಡಲು ಬೇಕಾದ ವಿಷಮ ವಾತಾವರಣವನ್ನು ಸೃಷಿಸುವುದು ಸಬ್ ಕಾ ವಿಶ್ವಾಸ್ ಎಂದಾರಾಗುತ್ತದೆಯೇ ಆದ್ದರಿಂದ ಸರ್ಕಾರ ಸಂಪೂರ್ಣವಾಗಿ ತನ್ನ ನೀತಿಗಳನ್ನು ಬದಲಾಯಿಸಬೇಕೆಂದೂ ಒತ್ತಾಯಿಸಿ ದೇಶದ ಎಲ್ಲಾ ರೈತರು, ಕೂಲಿಕಾರರು, ಕಾರ್ಮಿಕರು ಒಂದಾಗಿ ಚಳುವಳಿ ನಡೆಸುತ್ತಿದ್ದಾರೆ. ಇಂತಹ ಚಳುವಳಿಗಳ ಮೇಲೆ ದೆಹಲಿಯಲ್ಲಿ ಪೊಲೀಸ್ ದಬ್ಬಾಳಿಕೆ ಮಾಡಿರುವುದನ್ನು ಖಂಡಿಸುತ್ತದೆ.

ಸ್ವಾತಂತ್ರ, ಪ್ರಜಾಪ್ರಭುತ್ವ ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸಿ, ಧರ್ಮ ನಿರಪೇಕ್ಷ (ಜಾತ್ಯಾತೀತ) ಪ್ರಜಾಪ್ರಭತ್ವ, ಗಣತಂತ್ರದ ಸಂವಿಧಾನ ರಕ್ಷಣೆಗಾಗಿ ಆಗ್ರಹ ಡಾ.ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರಚಿಸಬೇಕು. ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳನ್ನು ರೂಪಿಸುವುದು.ನರೇಗಾ ಯೋಜನೆಯನ್ನು 200 ದಿನಗಳಿಗೆ ಹೆಚ್ಚಿಸಿ, 600 ರೂ ಕೂ ಲಿ ನಿಗದಿ ಮಾಡಿ, ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡುವುದು. ನ್ಯಾಯಯುತ ಉಖಖ ಪಾಲನ್ನು ರಾಜ್ಯಗಳಿಗೆ ಕೊಡುವ ಮುಖಾಂತರ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಲಾಯಿತು.

ಈ ಪ್ರತಿಭಟನೆಯ ನೇತೃತ್ವವನ್ನು ಕಟ್ಟಡ ಕಾರ್ಮೀಕರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೌಸ್‍ಪೀರ್ ವಹಿಸಿದ್ದರು. ಇದರಲ್ಲಿ ಎಐಟಿಯುಸಿಯ ಜಿಲ್ಲಾಧ್ಯಕ್ಷ ರವಿಕುಮಾರ್, ಕರ್ನಾಟಕ ಜನಶಕ್ತಿ ಜಿಲ್ಲಾಧ್ಯಕ್ಷ ಷಫಿವುಲ್ಲಾ, ಸರ್ವೋದಯ ಕರ್ನಾಟಕ ಜಿಲ್ಲಾಧ್ಯಕ್ಷ ಯಾದವರೆಡ್ಡಿ, ಅಬ್ದುಲ್ಲಾ, ರಾಘವೇಂದ್ರ, ಕರಿಯಮ್ಮ, ಮಂಜುನಾಥ್, ಆಯುಷ ಸೇರಿದಂತೆ ಇತರರು ಭಾಗವಹಿಸಿದ್ದರು.

Advertisement
Tags :
chitradurgademandingdemandsfulfillmentProtestsuddionesuddione newstrade unionsvariousಆಗ್ರಹಕಾರ್ಮಿಕಚಿತ್ರದುರ್ಗಪ್ರತಿಭಟನೆಬೇಡಿಕೆಗಳುವಿವಿಧಸಂಘಟನೆಗಳುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article