ಚಿತ್ರದುರ್ಗ | ಏಕೀಕೃತ ಪಿಂಚಣಿ ಯೋಜನೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 06 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್‌ಪಿಎಸ್ ತೆಗೆದು ಯುಪಿಎಸ್ ಅಂದರೆ ಎಕಿಕೃತ ಪಿಂಚಣಿ ಯೋಜನೆ ವಿರೋಧಿಸಿ ಸಾಂಕೇತಿಕವಾಗಿ ಕಪ್ಪು ಪಟ್ಟಿಯನ್ನು ಧರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಲಾಯಿತು.
ಕ.ರಾ.ಸ.NPS ನೌಕರರ ಸಂಘದ ಜಿಲ್ಲಾಧ್ಯಕ್ಷ ಇವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ನೌಕರರು ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಅದೇ ರೀತಿ ದೇಶದ 27 ರಾಜ್ಯಗಳಲ್ಲಿ NMOPS ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶಾಂತರಾಮ್ ತೇಜ ರವರ ನೇತೃತ್ವದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿಕೊಂಡು ಪ್ರತಿಭಟಿಸಿದರು.
ಈ ಹಿಂದೆ ರಾಜ್ಯ ಸರ್ಕಾರಿ NPS ನೌಕರರ ಸಂಘದ ವತಿಯಿಂದ ಹಲವಾರು ಹೋರಾಟಗಳು ನಡೆದಿದ್ದನ್ನು ಸ್ಮರಿಸಬಹುದು. ರಾಜ್ಯ ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಜಾರಿಗೊಳಿಸುವುದಾಗಿ ತಿಳಿಸಿದೆ ಅದರಂತೆ NPS ರದ್ದುಗೊಳಿಸಿ OPS ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ನೌಕರರ ಸಂಘದ ಪದಾಧಿಕಾರಿಗಳು ಚಿತ್ರದುರ್ಗ ನಗರದ ಜಿಲ್ಲಾ ಕಛೇರಿ, ತಾಲೂಕು ಕಚೇರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮನ್ವಯ ಅಧಿಕಾರಿಗಳ ಕಚೇರಿ, ಜಿಲ್ಲಾ ಶಿಕ್ಷಕರ ಶಿಕ್ಷಣ ಇಲಾಖೆಯ ಕಚೇರಿ, ಡಯಟ್, ಲೋಕೋಪಯೋಗಿ ಇಲಾಖೆ, ಭೂಮಾಪನ ಇಲಾಖೆ, ಚಿತ್ರದುರ್ಗ ಜಿಲ್ಲಾ ಪಂಚಾಯತಿ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಭದ್ರ ಮೇಲ್ದಂಡೆ ಯೋಜನೆ ಇಲಾಖೆ, ಚಿತ್ರದುರ್ಗ ಜಿಲ್ಲಾ ಖಜಾನ ಇಲಾಖೆ, ಸಬ್ ರಿಜಿಸ್ಟರ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ, ಇನ್ನು ಅನೇಕ ಇಲಾಖೆಗಳ ನೌಕರರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಏನ್.ಪಿ.ಎಸ್ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಡಾ ಸ.ರಾ.ಲೇಪಾಕ್ಷ, ರಾಜ್ಯ ಪರಿಷತ್ ಸದಸ್ಯರಾದ ಪಾಟೀಲ್, ಉಪಾಧ್ಯಕ್ಷರಾದ ರವಿಕುಮಾರ್, ಅಜಯ್ ಕುಮಾರ್, ಸಂಘಟನಾ ಕಾರ್ಯದರ್ಶಿಯಾದ ಇಕ್ಬಾಲ್, ವಿನಯ್, ಜಿಲ್ಲಾ ಪದಾಧಿಕಾರಿಗಳು ಹಾಗೂ ಚಿತ್ರದುರ್ಗ ತಾಲೂಕು nps ನೌಕರರ ಸಂಘದ ಅಧ್ಯಕ್ಷರಾದ ಕಲ್ಲೇಶ್ ಡಿ ಮೌರ್ಯ, ಪ್ರಧಾನ ಕಾರ್ಯದರ್ಶಿಗಳಾದ ಅಜಯ್ ಕುಮಾರ್, ಸಂಘಟನಾ ಕಾರ್ಯದರ್ಶಿಯದ CRP ರಾಜಪ್ಪ, ಶಿಕ್ಷಕರಾದ ಬಸವರಾಜ್, ಕೆಪಿಟಿಸಿಎಲ್ ಮಂಜುನಾಥ್, ಕರಿಬಸಯ್ಯ, ಶ್ರೀನಿವಾಸ್ ಇತರರು ಉಪಸ್ಥಿತಿಯಲ್ಲಿದ್ದರು.