ಚಿತ್ರದುರ್ಗ | ಅಪಘಾತಗಳನ್ನು ತಡೆಗಟ್ಟುವಂತೆ ಪಪ್ಪಿ ಸ್ಟೂಡೆಂಟ್ ವಿಂಗ್ ಮನವಿ
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಅ. 24 : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಬಿ.ಕಾಂ.ವಿದ್ಯಾರ್ಥಿ ಚೇತನ್ ಅಪಘಾತಕ್ಕಿಡಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಈ ಘಟನೆ ಹಿನ್ನೆಲೆಯಲ್ಲಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಡಿವೈಎಸ್ಪಿ ಕಚೇರಿ, ಬಡಾವಣೆ ಪೊಲೀಸ್ ಠಾಣೆಗೆ ಪಪ್ಪಿಸ್ ಸ್ಟೂಡೆಂಟ್ ವಿಂಗ್‍ನ ವಿದ್ಯಾರ್ಥಿಗಳು ಭೇಟಿ ನೀಡಿ ಹೆದ್ದಾರಿಗಳಲ್ಲಿ ದಟ್ಟಣೆಯ ವಾಹನಗಳು ಸಂಚರಿಸುವ ರಸ್ತೆಗಳಲ್ಲಿ ಬ್ಯಾರಿಕೇಟ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ನಗರ ಪ್ರದೇಶ ಹಾಗೂ ಹೊರವಲಯದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಇವುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸ್ ಇಲಾಖೆಯು ಶಾಲಾ-ಕಾಲೇಜು ಮಟ್ಟಗಳಲ್ಲಿ ಕಾರ್ಯಗಾರವನ್ನು ಮಾಡಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಪಪ್ಪಿಸ್ ಸ್ಟೂಡೆಂಟ್ ವಿಂಗ್‍ನ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರವೀಂದ್ರ, ಚಿನ್ನು, ಸಲೀಂ, ಜಾಫರ್ ಖಾನ್, ಅಭಾರ್ಹರ್, ಉದಯ್, ಪ್ರಜ್ವಲ್, ಸುದೀಪ್, ಸ್ವಾಮಿ, ಸುಮಂತ್,ಇತ್ತರರು ಇದ್ದರು.