For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ : ಜಿಲ್ಲೆಯ ಮಳೆ ವರದಿ

02:30 PM Aug 21, 2024 IST | suddionenews
ಚಿತ್ರದುರ್ಗ   ಜಿಲ್ಲೆಯ ಮಳೆ ವರದಿ
Advertisement

Advertisement
Advertisement

ಚಿತ್ರದುರ್ಗ. ಆಗಸ್ಟ್.21:  ಮಂಗಳವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 18.1 ಮಿ.ಮೀ ಮಳೆಯಾಗಿದೆ.

Advertisement

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 34.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 22.4 ಹಿರಿಯೂರು ತಾಲ್ಲೂಕು 9.4 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 8.5 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 6.4 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 21.6 ಮಿ.ಮೀ ಮಳೆಯಾಗಿದೆ.

Advertisement

ಹೋಬಳಿವಾರು ಮಳೆ ವಿವರ: ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 25.7 ಮಿ.ಮೀ, ನಾಯಕನಹಟ್ಟಿ 44.5 ಮಿ.ಮೀ, ಪರಶುರಾಂಪುರ 19.7 ಮಿ.ಮೀ, ತಳಕು 49.3 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 12.7 ಮಿ.ಮೀ, ಭರಮಸಾಗರ 38.2 ಮಿ.ಮೀ, ಹಿರೇಗುಂಟನೂರು 17.8 ಮಿ.ಮೀ, ತುರುವನೂರು 25.8 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 5.2 ಮಿ.ಮೀ, ಐಮಂಗಲ 8.8 ಮಿ.ಮೀ, ಧರ್ಮಪುರ 17.1 ಮಿ.ಮೀ, ಜೆ.ಜೆ.ಹಳ್ಳಿ 5.1 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 9.7 ಮಿ.ಮೀ, ಬಿ.ದುರ್ಗ 6.9 ಮಿ.ಮೀ, ರಾಮಗಿರಿ 14.1 ಮಿ.ಮೀ, ತಾಳ್ಯ 4.5 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 9.1 ಮಿ.ಮೀ, ಮಾಡದಕೆರೆ 1.9 ಮಿ.ಮೀ, ಮತ್ತೋಡು 4.2 ಮಿ.ಮೀ, ಶ್ರೀರಾಂಪುರ 10.5 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 18.6 ಮಿ.ಮೀ ಹಾಗೂ ದೇವಸಮುದ್ರದಲ್ಲಿ 24.9 ಮಿ.ಮೀ ಮಳೆಯಾಗಿದೆ.

49 ಮನೆಗಳು ಭಾಗಶಃ ಹಾನಿ:  ಮಂಗಳವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 49 ಮನೆಗಳು ಭಾಗಶಃ ಹಾನಿ, 3 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದ್ದು, 8 ಹೆಕ್ಟೇರ್ ತೋಟಗಾರಿಕೆ ಬೆಳೆ, 17 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 26 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮನೆಗಳು ಭಾಗಶಃ ಹಾನಿ ಹಾಗೂ 5 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 4 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 3 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ. ಹಿರಿಯೂರು ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿಯಾಗಿವೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿದ್ದು, 13 ಹೆಕ್ಟೇರ್ ಕೃಷಿ ಬೆಳೆ ಹಾಗೂ 3.3 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags :
Advertisement