Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕ ಶಿವು ನೇಮಕ

04:23 PM Aug 05, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.05 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್‍ರವರ ಆದೇಶದಂತೆ ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕ ಶಿವು ಇವರನ್ನು ನೇಮಕ ಮಾಡಲಾಗಿದೆ.

Advertisement

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಕಾಂಗ್ರೆಸ್ ಕಚೇರಿಯಲ್ಲಿ ರೇಣುಕಶಿವುರವರಿಗೆ ನೇಮಕಾತಿ ಪತ್ರ ನೀಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಸಂಘಟಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಅಬ್ದುಲ್ಲಾ, ಸೈಯದ್ ಅಲ್ಲಾಭಕ್ಷಿ ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
appointedbengaluruBlock Congresschitradurgacitygeneral secretarySmt. Renuka Shivusuddionesuddione newsಚಿತ್ರದುರ್ಗನಗರನೇಮಕಪ್ರಧಾನ ಕಾರ್ಯದರ್ಶಿಬೆಂಗಳೂರುಬ್ಲಾಕ್ ಕಾಂಗ್ರೆಸ್ಶ್ರೀಮತಿ ರೇಣುಕ ಶಿವುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article