Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | SSLC ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು‌ : ನಾಲ್ವರು ಶಿಕ್ಷಕರ ಅಮಾನತುಗೊಳಿಸಿ ಡಿಡಿಪಿಐ ಆದೇಶ

05:59 PM Mar 30, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.30 : 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರ ಅಮಾನತು ಮಾಡಿ ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಆದೇಶಿಸಿದ್ದಾರೆ.

Advertisement

ಚಳ್ಳಕೆರೆ ತಾಲೂಕಿನ

1 ) ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ,

Advertisement

2 ) ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ

3 ) ಪಿ. ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಮತ್ತು

4) ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡ ಶಿಕ್ಷಕರು.

ಇಂದು (ಶನಿವಾರ) ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದು, ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ. ಹಾಗೂ ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪವೆಸಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮಾರ್ಚ್ 30ರಂದು ನಡೆದ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಷಯದ ಪರೀಕ್ಷೆಗೆ ಒಟ್ಟು 22122 ವಿದ್ಯಾರ್ಥಿಗಳು ಹಾಜರಾಗಿದ್ದು, 310 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆಗೆ 22432 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 22122 ವಿದ್ಯಾರ್ಥಿಗಳು ಹಾಜರಾಗಿ, 310 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement
Tags :
chitradurgaddpiDDPI Ravi Shankar Reddyorders suspensionSSLC EXAMSSLC examsSSLC ಪರೀಕ್ಷೆStudents cheatingಚಿತ್ರದುರ್ಗಡಿಡಿಪಿಐ ಆದೇಶನಾಲ್ವರು ಶಿಕ್ಷಕರ ಅಮಾನತುವಿದ್ಯಾರ್ಥಿಗಳು ನಕಲು‌
Advertisement
Next Article