Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಹಿಂದಿ ಹೇರಿಕೆ ಖಂಡಿಸಿ ಟಿ.ಎ.ನಾರಾಯಣಗೌಡ ಬಣದ ಕರವೇ ಪ್ರತಿಭಟನೆ

08:11 PM Sep 14, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 14 : ಕೇಂದ್ರ ಸರ್ಕಾರದ ಹಿಂದಿ ವಿರೋಧಿ ಹೇರಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

Advertisement

ಕೇಂದ್ರ ಸರ್ಕಾರ ಈ ಕೂಡಲೆ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ ಎಂಟನೆ ಪರಿಚ್ಚೇದದಲ್ಲಿ ಉಲ್ಲೇಖಿಸಿರುವ ಎಲ್ಲಾ 22 ಭಾಷೆಗಳನ್ನು ಅಧಿಕೃತ, ಆಡಳಿತ ಭಾಷೆಯನ್ನಾಗಿ ಘೋಷಿಸಿ ದೇಶದ ಬಹುತ್ವ, ಸಾರ್ವಭೌಮತ್ವವನ್ನು ಕಾಪಾಡಬೇಕು. 343 ರಿಂದ 351 ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲಾ ಭಾಷೆಗಳಿಗೂ ಒಕ್ಕೂಟದ ದೃಷ್ಠಿಯಲ್ಲಿ ಸಮಾನವೆಂದು ಪರಿಗಣಿಸಬೇಕು. ಕರ್ನಾಟಕದಲ್ಲಿರುವ ಎಲ್ಲಾ ಕೇಂದ್ರ ಸರ್ಕಾರಿ ಶಾಲೆಗಳು ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಕನ್ನಡದಲ್ಲೇ ಎಲ್ಲಾ ಬಗೆಯ ವ್ಯವಹಾರಗಳು ನಡೆಯಬೇಕು. ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರವನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ರಮೇಶ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷ ಆರ್.ಜಿ.ಲಕ್ಷ್ಮಣ್, ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಜಿ.ರಾಜಪ್ಪ, ನಗರಾಧ್ಯಕ್ಷ ಪಿ.ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಮೇಶ್, ವಸಂತ, ಮಲ್ಲಾಪ್ರಸಾದ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಮನು, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನೀಲಕಂಠ, ಪ್ರಸನ್ನ, ಜಯಪ್ಪ, ದ್ರಾಕ್ಷಾಯಿಣಿ, ಸುಮ, ಮಂಜುಳ, ರಾಮಕೃಷ್ಣಪ್ಪ, ದಾದಾಪೀರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement
Tags :
bengaluruchitradurgahindiimpositionprotestssuddionesuddione newsTA Narayana Gowda karaveಚಿತ್ರದುರ್ಗಟಿ.ಎ.ನಾರಾಯಣಗೌಡ ಬಣ ಕರವೇಪ್ರತಿಭಟನೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹಿಂದಿ ಹೇರಿಕೆ
Advertisement
Next Article