Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಐಮಂಗಲ ಬಳಿ ಭೀಕರ ಅಪಘಾತ : ಓರ್ವ ಮೃತ

10:40 AM Dec 23, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 23: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಐಮಂಗಲ ಬಳಿ ನಡೆದಿದೆ.

Advertisement

ಚಿತ್ರದುರ್ಗದ ಜಿ.ಸಿ. ಹೊಯ್ಸಳ, (28 ವರ್ಷ) ಮೃತ ವ್ಯಕ್ತಿ. ಇವರು ಚಿತ್ರದುರ್ಗದಿಂದ ಬೆಂಗಳೂರಿಗೆ ಹೊರಟಿದ್ದರು ಎನ್ನಲಾಗಿದೆ. ಐಮಂಗಲ ಬಳಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement
Tags :
AimangalabengaluruchitradurgakannadaKannadaNewsone deadsuddionesuddionenewsTerrible accidentಐಮಂಗಲಓರ್ವ ಮೃತಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬೆಂಗಳೂರುಭೀಕರ ಅಪಘಾತಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article