For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಜೂನ್ 28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

04:59 PM Jun 22, 2024 IST | suddionenews
ಚಿತ್ರದುರ್ಗ   ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಜೂನ್ 28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ,ಜೂನ್. 22 : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣ ನಡೆದಿರುವುದರಿಂದ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಜೂನ್ 28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಸಂಬಂಧ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

Advertisement

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ 187 ಕೋಟಿ ರೂ.ಗಳನ್ನು ಆಂಧ್ರದ ಚುನಾವಣೆಗೆ ಸಾಗಿಸಲಾಗಿದೆ. ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜ್ಯದಿಂದ ಅನೇಕ ಮುಖಂಡರುಗಳು ಆಗಮಿಸಲಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ ಎಂದರು.

Advertisement
Advertisement

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ ಇವರುಗಳು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ.ಮುಖಂಡರುಗಳಾದ ಕೆ.ಟಿ.ಕುಮಾರಸ್ವಾಮಿ, ಎಸ್ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ, ದೇವರಾಜ್ ಹೊಸದುರ್ಗ, ನವೀನ್ ಚಳ್ಳಕೆರೆ, ಎಸ್ಟಿ.ಮೋರ್ಚಾ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.

Advertisement
Tags :
Advertisement