Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಟೈರ್ ಸ್ಫೋಟ, ಕಾರು ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು

03:14 PM Feb 06, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.06  : ವೇಗವಾಗಿ ಚಲಿಸಿತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಕೆ. ಬಳ್ಳೇಕಟ್ಟೆ ಬಳಿ ಸಂಭವಿಸಿದೆ.

Advertisement

ತಾಲ್ಲೂಕಿನ ಭರಮಸಾಗರ ವ್ಯಾಪ್ತಿಯ ಕೆ.ಬಳ್ಳೆಕಟ್ಟೆ ಬಳಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಕಾರು ಬೆಂಗಳೂರಿನಿಂದ ಪೂನಾ ಕಡೆಗೆ ಚಲಿಸುತ್ತಿತ್ತು. ಕೆ ಬಳ್ಳೇಕಟ್ಟೆ ಬಳಿ ಬಂದಾಗ ಕಾರಿನ ಟೈರ್ ಸ್ಪೋಟವಾಗಿ ಚಾಲಕನ ನಿಯಂತ್ರಣ ತಪ್ಪಿ ಎಡಗಡೆಯಿದ್ದ ಬ್ಯರಿಕೇಡ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆಯಾಗಿಲ್ಲ.  ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಚಿತ್ರದುರ್ಗ ಎಸ್.ಪಿ. , ಡಿ ವೈ. ಎಸ್.ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Advertisement
Tags :
carchitradurgaoverturnedspot!suddionesuddione newstire bursttwo diedಇಬ್ಬರುಕಾರುಚಿತ್ರದುರ್ಗಟೈರ್ಪಲ್ಟಿಸುದ್ದಿಒನ್ಸುದ್ದಿಒನ್ ನ್ಯೂಸ್ಸ್ಥಳದಲ್ಲೇ ಸಾವುಸ್ಫೋಟ
Advertisement
Next Article