Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು  ಮಳೆಯಾಗಿದೆ ? ಇಲ್ಲಿದೆ ಮಾಹಿತಿ...!

06:32 PM Aug 16, 2024 IST | suddionenews
Advertisement

ಚಿತ್ರದುರ್ಗ. ಆಗಸ್ಟ್.16:  ಗುರುವಾರ ಸುರಿದ ಮಳೆ ವಿವರದನ್ವಯ ಹೊಸದುರ್ಗ ತಾಲ್ಲೂಕಿನಲ್ಲಿ 22.9 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಾಗಿದೆ.

Advertisement

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 18.8 ಮಿ.ಮೀ, ಹಿರಿಯೂರು ತಾಲ್ಲೂಕು 4.3 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 6.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 10.30 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.3 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 17.9 ಮಿ.ಮೀ, ನಾಯಕನಹಟ್ಟಿ 18.2 ಮಿ.ಮೀ, ಪರಶುರಾಂಪುರ 22.5 ಮಿ.ಮೀ, ತಳಕು 16.7 ಮಿ.ಮೀ ಮಳೆಯಾಗಿದೆ.

Advertisement

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 9.8 ಮಿ.ಮೀ, ಭರಮಸಾಗರ 7 ಮಿ.ಮೀ, ಹಿರೇಗುಂಟನೂರು 16.6 ಮಿ.ಮೀ, ತುರುವನೂರು 9.8 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 3.8 ಮಿ.ಮೀ, ಐಮಂಗಲ 2.9 ಮಿ.ಮೀ, ಧರ್ಮಪುರ 8.6 ಮಿ.ಮೀ, ಜೆ.ಜೆ.ಹಳ್ಳಿ 2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 3.7 ಮಿ.ಮೀ, ಬಿ.ದುರ್ಗ 15.2 ಮಿ.ಮೀ, ರಾಮಗಿರಿ 1.3 ಮಿ.ಮೀ, ತಾಳ್ಯ 6.5 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.4 ಮಿ.ಮೀ, ಮಾಡದಕೆರೆ 7 ಮಿ.ಮೀ, ಮತ್ತೋಡು 49.6 ಮಿ.ಮೀ, ಶ್ರೀರಾಂಪುರ 46.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರುನಲ್ಲಿ 1 ಮಿ.ಮೀ ಹಾಗೂ ದೇಮಸಮುದ್ರದಲ್ಲಿ 1.6 ಮಿ.ಮೀ ಮಳೆಯಾಗಿದೆ.

21 ಮನೆಗಳು ಭಾಗಶಃ ಹಾನಿ: ಗುರುವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 21 ಮನೆಗಳು ಭಾಗಶಃ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 15 ಮನೆಗಳು ಭಾಗಶಃ ಹಾನಿ ಹಾಗೂ 1 ಹಸು ಮೃತಪಟ್ಟಿದೆ. ಹೊಳಲ್ಕೆರೆಯಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ ಹಾಗೂ ಮೊಳಕಾಲ್ಮುರ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Tags :
bengaluruchitradurgaRainsuddionesuddione newsಚಿತ್ರದುರ್ಗಬೆಂಗಳೂರುಮಳೆ ವರದಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article