Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷದ ಸರ್ಕಾರ ಸಿದ್ಧ :ಶಾಸಕ ಟಿ ರಘುಮೂರ್ತಿ 

08:48 PM Jul 07, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಸುದ್ದಿಒನ್, ಚಳ್ಳಕೆರೆ, ಜುಲೈ. 07  ಮಾಧ್ಯಮಗಳು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ವರದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಅರ್ಥ ಬರುತ್ತದೆ ಯಾವುದೇ ಸುದ್ದಿಗಳನ್ನು ವರದಿ ಮಾಡುವಾಗ ಕೂಲಂಕುಶವಾಗಿ ಪರಿಶೀಲನೆ ಮಾಡಿ ಪ್ರಕಟಿಸುವುದು ಮಾಧ್ಯಮದ ಜವಾಬ್ದಾರಿ ಎಂದು ಶಾಸಕ ರಘುಮೂರ್ತಿ ತಿಳಿಸಿದರು‌.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆ ವತಿಯಿಂದ ಏರ್ಪಡಿಸಿದ್ದ ಪತ್ರಿಕೆ ದಿನಾಚರಣೆಯನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮಾಧ್ಯಮಗಳು ನಿಷ್ಟೂರವಾದಿಯಾಗಿ ಕರ್ತವ್ಯವನ್ನು ನಿರ್ವಹಿಸಬೇಕು ಜನಸಾಮಾನ್ಯರು ರಾಜಕಾರಣಕ್ಕಿಂತ ಹೆಚ್ಚಾಗಿ ಮಾಧ್ಯಮಗಳನ್ನು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅವಲಂಬಿಸುತ್ತಾರೆ ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಅಗಾಧವಾಗಿ ಬೆಳವಣಿಗೆ ಹೊಂದಿದ್ದು ಯುವಕರು ಪತ್ರಿಕೋದ್ಯಮದ ಕಡೆ ಆಕರ್ಷಿತರಾಗುತ್ತಿದ್ದಾರೆ ಪತ್ರಿಕೋದ್ಯಮದಲ್ಲಿ ಹಲವಾರು ಸಂಕಷ್ಟಗಳನ್ನು ಪತ್ರಕರ್ತರು ಎದುರಿಸುತ್ತಿದ್ದಾರೆ ಆದರೂ ತಮ್ಮ ಧೈರ್ಯದಿಂದ ಉದ್ಯಮವನ್ನು ನಡೆಸುತ್ತಿದ್ದಾರೆ ಕಾಂಗ್ರೆಸ್ ಸರ್ಕಾರ ಪತ್ರಕರ್ತರ ಬೇಡಿಕೆಗಳನ್ನು ನಿಯಮಾನುಸಾರ ಈಡೇರಿಸಲು ಬದ್ಧವಾಗಿದ್ದು ನಾನು ಸಹ ಸರ್ಕಾರಕ್ಕೆ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಕೊಡುತ್ತೇನೆ ತಿಳಿಸಿದರು.

Advertisement

ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ಪತ್ರಕರ್ತರ ಧ್ವನಿ ಸಂಘಟನೆ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಕಳೆದ ಬಾರಿ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ಮಾಡಿ ನಮ್ಮ ಮನವಿಗಳನ್ನು ಸಲ್ಲಿಸಿದರು ಸಹ ಸರ್ಕಾರ ಕಡೆಗಣಿಸಿದೆ  ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುತ್ತಾರೆ ಎಂಬ ಭರವಸೆ ಇದೆ ಯಾವುದೇ ಸರ್ಕಾರಗಳು ಬಂದರೂ ಪತ್ರಕರ್ತರನ್ನು ಕಡೆಗಣಿಸಲಾಗುತ್ತಿದೆ ಪತ್ರಕರ್ತರು ಇಂದಿನ ದಿನಗಳಲ್ಲಿ ತಮ್ಮ ಕುಟುಂಬವನ್ನು ಸಲಹಲು ಸಹ ಸಾಧ್ಯವಾಗದಷ್ಟು ಮಟ್ಟಿಗೆ ಕಷ್ಟದ ಜೀವನ ನಡೆಸುತ್ತಿದ್ದಾರೆ ರಾಜ್ಯದಲ್ಲಿ 17,000 ಪತ್ರಕರ್ತರಿದ್ದು ಹೀನಾಯ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಬಸ್ ಪಾಸ್ ವಿತರಣೆ ಮಾಸಾಶನ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದರು ಇದುವರೆಗೂ ಈಡೇರಿಲ್ಲ ಈ ಧೋರಣೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಹೋರಾಟದ ಹಾದಿ ಹಿಡಿದು ತಮ್ಮ ಹಕ್ಕನ್ನು ಪಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಸಾಹಿತಿ ಕೊರಲಕುಂಟೆ ತಿಪ್ಪೇಸ್ವಾಮಿ ಶಾಸಕರಾದಿಯಾಗಿ ಸಚಿವರುಗಳ ಕಾರ್ಯಕ್ರಮಗಳಿಗೆ ಪತ್ರಕರ್ತರು ತೆರಳಿ ದಿನನಿತ್ಯ ಸುದ್ದಿಗಳನ್ನು ಮಾಡುತ್ತಾರೆ ಆದರೆ ಅವರ ಜೀವನಮಟ್ಟ ಇದುವರೆಗೂ ಸುಧಾರಣೆ ಕಂಡಿಲ್ಲ ಪತ್ರಕರ್ತರಿಗೂ ತನ್ನದೇ ಆದ ಜವಾಬ್ದಾರಿಗಳು ಇರುತ್ತವೆ ತನ್ನ ಕುಟುಂಬವನ್ನು ಸಲಹಲು ಸಾಧ್ಯವಾಗದಂತಹ ಪರಿಸ್ಥಿತಿ ಪತ್ರಕರ್ತರಿಗೆ ನಿರ್ಮಾಣವಾಗಿದೆ ಈ ನಿಟ್ಟಿನಲ್ಲಿ ಸರ್ಕಾರ ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವ ಕಾರ್ಯ ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪತ್ರಕರ್ತ ಬೆಳಗೆರೆ ಸುರೇಶ್ನಂ ಪ್ರಗತಿಪರ ರೈತರಾದ ಆರ್ ಎ ದಯಾನಂದ ವಕೀಲ ಕುಮಾರಸ್ವಾಮಿ ಹಾಗೂ ಪೌರಕಾರ್ಮಿಕರಿಗೆ  ಸನ್ಮಾನಿಸಲಾಯಿತು ಈ ವೇಳೆ ಜೂನಿಯರ್ ವಿಷ್ಣುವರ್ಧನ್ ಹಾಗೂ ಜೂನಿಯರ್ ಅಂಬರೀಶ್ ತಮ್ಮ ನಟನೆಯಿಂದ ರಂಜಿಸಿದರು.

ಈ ಸಂದರ್ಭದಲ್ಲಿ ಮೇದಾರ ಕೇತೇಶ್ವರ ಸ್ವಾಮೀಜಿ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ದ್ರಾಕ್ಷಾ ರಸ ನಿಗಮದ ಅಧ್ಯಕ್ಷರಾದ  ಬಿ.ಯೋಗೇಶ್ ಬಾಬು, ಪತ್ರಕರ್ತರ ಸಂಘದ ಅಧ್ಯಕ್ಷರಾದ  ಮಂಜುನಾಥ್,  ದ್ಯಾಮರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ವೀರಭದ್ರಪ್ಪ, ನಗರಸಭೆ ಸದಸ್ಯರಾದ  ರಾಘವೇಂದ್ರ, ಗ್ರಾಮ ಪಂಚಾಯಿತಿ ಸದಸ್ಯರಾದ ಆನಂದ ಕುಮಾರ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Tags :
bengaluruchitradurgacongress partyfulfill the demandsGovernmentJournalists​​MLA T Raghumurthyreadysuddionesuddione newsಕಾಂಗ್ರೆಸ್ ಪಕ್ಷಚಳ್ಳಕೆರೆಚಿತ್ರದುರ್ಗಪತ್ರಕರ್ತರುಬೆಂಗಳೂರುಬೇಡಿಕೆಗಳುಶಾಸಕ ಟಿ.ರಘುಮೂರ್ತಿಸರ್ಕಾರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article