Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಒಳಮೀಸಲಾತಿ ಜಾರಿಗೆ ಸಮ್ಮತಿ : ಸಿಎಂ ನಿರ್ಧಾರಕ್ಕೆ ಮಾಜಿ ಸಚಿವ ಆಂಜನೇಯ ಸಂತಸ

05:29 PM Oct 28, 2024 IST | suddionenews
Advertisement

 

Advertisement

 

ಚಿತ್ರದುರ್ಗ:ಅ.28 : ಪರಿಶಿಷ್ಟ ಜಾತಿಯಲ್ಲಿ ನೂರಾರು ಸಮುದಾಯಗಳ ಮಧ್ಯೆ ಪೈಪೋಟಿ ನಡೆಸಿ ಮೀಸಲಾತಿ ಪಡೆಯುವಲ್ಲಿ ಮಾದಿಗ ಸಮುದಾಯ ವಿಫಲವಾಗಿದ್ದು, ಒಳಮೀಸಲಾತಿ ಮೂಲಕ ನ್ಯಾಯ ದೊರಕಿಸಿಕೊಡಬೇಕೆಂಬ ಸಮುದಾಯದ ಕೂಗಿಗೆ ಸಿಎಂ ಸಿದ್ದರಾಮಯ್ಯ ಧ್ವನಿಯಾಗಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಸ ವ್ಯಕ್ತಪಡಿಸಿದ್ದಾರೆ.

Advertisement

ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸದಾಶಿವ ಆಯೋಗ ರಚಿಸಿದ್ದ ಕಾಂಗ್ರೆಸ್ ಪಕ್ಷ, ಚುನಾವಣಾ ಪ್ರಣಾಳಿಕೆಯಲ್ಲೂ ಒಳಮೀಸಲಾತಿ ಜಾರಿಗೆ ಬದ್ಧ ಎಂದು ಘೋಷಿಸಿತ್ತು. ಆದರೆ, ಕಾನೂನು ತೊಡಕು ಅಡ್ಡಿಯಾಗಿತ್ತು ಎಂದಿದ್ದಾರೆ. ಮೂರು ದಶಕಗಳ ಕಾಲ ಸಮುದಾಯದ ನಾಯಕರು, ಸಂಘಟನೆಗಳು ನಡೆಸಿದ ಹೋರಾಟದ ಫಲ ಸುಪ್ರೀಂ ಕೋರ್ಟ್ ತೀರ್ಪು ಮರುಜೀವ ನೀಡಿತ್ತು. ಅದನ್ನು ಅನುಷ್ಠಾನಗೊಳಿಸುವಲ್ಲಿ ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸೋಮವಾರ ಸಮ್ಮತಿ ವ್ಯಕ್ತಪಡಿಸಿದ್ದು, ಈ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಲು ಸಿದ್ದರಾಮಯ್ಯ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಿ, ಮೂರು ತಿಂಗಳೊಳಗೆ ದತ್ತಾಂಶದ ವರದಿ ತರಿಸಿಕೊಂಡು ಒಳಮೀಸಲಾತಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜತೆಗೆ ಸರ್ಕಾರಿ ಉದ್ಯೋಗ ನೇಮಕಾತಿಗೆ ತಡೆ ಹಾಕಿರುವುದು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ ಎಂದಿದ್ದಾರೆ.

ಕೆಪಿಎಸ್ಸಿ ಸೇರಿ ಎಲ್ಲ ರೀತಿಯ ನೇಮಕಾತಿಗಳ ಪ್ರಕ್ರಿಯೆಗೆ ತಡೆ ಹಾಕುವ ಜತೆಗೆ ಎಸ್‍ಸಿಎಸ್‍ಪಿ, ಟಿಎಸ್‍ಪಿ ಹಣ ಹಂಚಿಕೆಗೂ ತಡೆ ಹಾಕುವ ನಿರ್ಧಾರ ಕೈಗೊಳ್ಳಬೇಕು. ಮುಖ್ಯವಾಗಿ ಮೂರು ತಿಂಗಳೊಳಗೆ ವರದಿ ತರಿಸಿಕೊಂಡು, 4ನೇ ತಿಂಗಳಲ್ಲಿ ಒಳಮೀಸಲಾತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಆಗದಂತೆ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಜತೆಗೆ ಈ ಅವಧಿಯಲ್ಲಿ ಯಾವುದೇ ಸರ್ಕಾರಿ ನೇಮಕಾತಿ ಆಗದ ಕಾರಣಕ್ಕೆ ವಯಸ್ಸಿನ ಮೀತಿಯನ್ನು ನಾಲ್ಕು ತಿಂಗಳು ಸಡಿಲಗೊಳಿಸಿ, ಎಲ್ಲ ವರ್ಗದ ವಿದ್ಯಾವಂತರಿಗೆ ನ್ಯಾಯ ಕಲ್ಪಿಸಬೇಕು. ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ಸಹಸ್ರಾರು ಮಂದಿ, ಹತ್ತಾರು ಸಂಘಟನೆಗಳು ಹೋರಾಟ ನಡೆಸಿದ್ದು, ಅವರೆಲ್ಲರ ಆಶಯದಂತೆ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಕಲ್ಪಿಸಲು ಕ್ರಮಕೈಗೊಂಡಿರುವ ನಿರ್ಧಾರ ಸ್ವಾಗತರ್ಹ ಎಂದು ಹೇಳಿದ್ದಾರೆ.

Advertisement
Tags :
bengaluruchitradurgaConsentEx-minister Anjaneyaimplementationinternal reservationsuddionesuddione newsಒಳಮೀಸಲಾತಿಚಿತ್ರದುರ್ಗಬೆಂಗಳೂರುಮಾಜಿ ಸಚಿವ ಆಂಜನೇಯಸಂತಸಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article