For the best experience, open
https://m.suddione.com
on your mobile browser.
Advertisement

ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯ ಸರಿಪಡಿಸಿ : ಚಿತ್ರದುರ್ಗದಲ್ಲಿ ಶಿಕ್ಷಕರ ಪ್ರತಿಭಟನೆ

06:08 PM Aug 07, 2024 IST | suddionenews
ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯ ಸರಿಪಡಿಸಿ   ಚಿತ್ರದುರ್ಗದಲ್ಲಿ ಶಿಕ್ಷಕರ ಪ್ರತಿಭಟನೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 07 :  2017 ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸಬೇಕು, ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಸಂಘದವತಿಯಿಂದ ಜಿಲ್ಲಾಡಳಿತಕ್ಕೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಿಗೆ ಬುಧವಾರ ಮನವಿಯನ್ನು ಸಲ್ಲಿಸಲಾಯಿತು.

Advertisement

ನಗರದ ಬಿಇಒ ಕಚೇರಿಯಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯೂ ಡಾ.ಅಂಬೇಡ್ಕರ್ ವೃತ್ತದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಓನಕೆ ಒಬವ್ವ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಾಣ ಮಾಡಿ ಸರ್ಕಾರದ ವಿರುದ್ದ ತಮ್ಮ ಅಕ್ರೋಶವನ್ನು ವ್ಯಕ್ತಪಡಿ ಘೋಷಣೆಯನ್ನು ಕೂಗಲಾಯಿತು.

Advertisement

ಕರ್ನಾಟಕ ರಾಜ್ಯವು ಶಾಲಾ ಶಿಕ್ಷಣದಲ್ಲಿ ಅನೇಕ ಹೊಸ ಉಪಕ್ರಮಗಳನ್ನು ತರುವುದರ ಮೂಲಕ ದೇಶದಲ್ಲಿ ಮಾದರಿಗಳನ್ನು ನಿರ್ಮಿಸಿದೆ, ಕಾಲಕಾಲಕ್ಕೆ ಆಗುವ ಶೈಕ್ಷಣಿಕ ಬದಲಾವಣೆಗಳನ್ನು ನಮ್ಮ ರಾಜ್ಯದಲ್ಲೂ ಶಾಲಾ ಶಿಕ್ಷಣ ಇಲಾಖೆ ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ. ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 1,88,532 ಶಿಕ್ಷಕರಲ್ಲಿ ಹಿರಿಯ ಮುಖ್ಯ ಶಿಕ್ಷಕರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿಶೇಷ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಾ 1 ರಿಂದ 7, 1 ರಿಂದ 8ನೇ ತರಗತಿಗಳನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತಾ ಬಂದಿದ್ದಾರೆ.ಓಅಖಿಇ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸುಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯ ಪದನಾಮವನ್ನು ಬದಲಾಯಿಸಿ, ಹೊಸ ವೃಂದ ಹಾಗೂ ವೃಂದ ಬಲವನ್ನು ನಿರ್ಧರಿಸುವ ಕುರಿತು ಆದೇಶ ಹೊರಡಿಸಿದ ಪ್ರಾಥಮಿಕ ಶಾಲಾ ಸಹ ಶಿಕ್ಷಕ ವೃಂದವನ್ನು ಮುಖ್ಯವಾಗಿ ಪ್ರಾಥಮಿಕ ಶಾಲಾ ಶಿಕ್ಷಕರು 1 ರಿಂದ 5ಕ್ಕೆ1,12,467 ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು 6 ರಿಂದ 8ಕ್ಕೆ 51,781 ಎಂದು ವೃಂದವಾರು ಹುದ್ದೆಗಳನ್ನು ಮಂಜೂರಿಸಿ ಆದೇಶಿಸಿದೆ. ತತ್ಪರಿಣಾಮವಾಗಿ 2016ಕ್ಕಿಂತ ಮೊದಲು 1 ರಿಂದ 7, 1 ರಿಂದ 8 ವೃಂದಕ್ಕೆ ನೇಮಕಾತಿಯಾದ ಎಲ್ಲಾ ಸಹಶಿಕ್ಷಕರು ಪ್ರಾಥಮಿಕ ಶಾಲಾ ಶಿಕ್ಷಕರು 1 ರಿಂದ 5 ಎಂದು ಪರಿಗಣಿಸಿದ್ದು, ಶಿಕ್ಷಕರಿಗೆ ತೀವ್ರ ಅನ್ಯಾಯವಾಗಿದೆ. 2017ರ ಹೊಸ ವೃಂದಬಲ ನಿಗದಿಯಾಗು ವವರೆಗೆ ಪ್ರಾಥಮಿಕ ಶಾಲಾ ಸಹ ಶಿಕ್ಷಕ ವೃಂದದಿಂದ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-2 ವೃಂದಕ್ಕೆ ನಿಯಮಿತವಾಗಿ ಬಡ್ತಿ ನೀಡುವಲ್ಲಿ ಯಾವುದೇ ಸಮಸ್ಯೆಗಳು ಇರಲಿಲ್ಲ. ಪ್ರಾಥಮಿಕ ಶಾಲೆಗಳಲ್ಲಿ 2017ರ ಹೊಸ ವೃಂದ ಬಲ ನಿಗದಿಯಿಂದಾಗಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2ವೃಂದಕ್ಕೆ ಬಡ್ತಿ ನೀಡುವಾಗ ಗೊಂದಲಗಳು ಉಂಟಾದುದ್ದನ್ನು ನಮ್ಮ ಸಂಘಟನೆಯು ಬಲವಾಗಿ ತಿಳಿಸುತ್ತಾ ಬಂದಿದ್ದರೂ, ಅದನ್ನು ಪರಿಹರಿಸದೇ, ಮುಂದೂಡುತ್ತಾ ಬರಲಾಗಿದೆ.

1 ರಿಂದ 5 ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪದನಾಮೀಕರಿಸಿರುವ 2016ಕ್ಕಿಂತ ಮೊದಲು ನೇಮಕವಾದ 1 ರಿಂದ 7, 1 ರಿಂದ 8 ವೃಂದದಪ್ರಾಥಮಿಕ ಶಾಲಾ ಸಹ ಶಿಕ್ಷಕರಲ್ಲಿ ಸುಮಾರು 80000ಕ್ಕೂ ಅಧಿಕ ಶಿಕ್ಷಕರು ಪದವಿಯೊಂದಿಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿದ್ದರೂ ಇವರನ್ನು 6 ರಿಂದ8ಕ್ಕೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪರಿಗಣಿಸದೇ ಇರುವುದು ದುರಾದೃಷ್ಟಕರ. ಇದರ ನಡುವೆ 2016ರಿಂದ ಇತ್ತೀಚೆಗೆ 6ರಿಂದ 8 ವೃಂದದ20110 ಶಿಕ್ಷಕರ ನೇಮಕಾತಿಯಾಗಿದ್ದು, ತತ್ಪರಿಣಾಮದಿಂದಾಗಿ ಅಷ್ಟೇ ಸಂಖ್ಯೆಯ 1 ರಿಂದ 5 ವೃಂದದ ಶಿಕ್ಷಕರ ಹೆಚ್ಚುವರಿ ಸಮಸ್ಯೆ ಸೃಷ್ಟಿಯಾಗಿತ್ತು. ಅದೇರೀತಿ ವರ್ಗಾವಣೆ ಪ್ರಕ್ರಿಯೆಯಲ್ಲೂ ಈ ವೃಂದ ಬಲದ ನಿಗದಿ ಸ್ಥಳಗಳ ಆಯ್ಕೆಯಲ್ಲಿ ತೀವ್ರವಾಗಿ ಶಿಕ್ಷಕರಿಗೆ ಸಮಸ್ಯೆ ಸೃಷ್ಟಿಸಿದೆ.

ಇದರ ಜೊತೆಯಲ್ಲಿ ವೃಂದಬಲ ನಿಗದಿಯಿಂದ ವೇತನ ಶ್ರೇಣಿ ವ್ಯತ್ಯಾಸವಾಗಿ ಶಿಕ್ಷಕರ ಮನೋಸ್ಥೈರ್ಯದ ಮೇಲೆ ಋಣಾತ್ಮಕಪರಿಣಾಮವಾದಾಗ್ಯೂ, ಈಗಿನವರೆಗೂ 1 ರಿಂದ 5 ಶಿಕ್ಷಕ ವೃಂದದವರೆಂದು ಪರಿಗಣಿತವಾದ 1 ರಿಂದ 7, 1 ರಿಂದ 8ಕ್ಕೆ ನೇಮಕಾತಿ ಯಾದ ಶಿಕ್ಷಕರು ಯಾವುದೇ ಆರ್ಥಿಕ ಸೌಲಭ್ಯ ಬಯಸದೇ, 6 ರಿಂದ 8ನೇ ತರಗತಿ ನಿರ್ವಹಣೆ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದಾರೆ.

ಇದೇ ಸಂದರ್ಭದಲ್ಲಿ 6 ರಿಂದ 8ನೇ ತರಗತಿಗೆ ನೇಮಕವಾದ 20110 ಶಿಕ್ಷಕರು ಕೇವಲ 6 ರಿಂದ 8ನೇ ತರಗತಿ ಬೋಧನೆ ಮಾತ್ರ ಮಾಡುತ್ತಿದ್ದು,1 ರಿಂದ 5ನೇ ತರಗತಿ ಬೋಧನೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ 1 ರಿಂದ 7 ಮತ್ತು 1 ರಿಂದ 8ಕ್ಕೆ ನೇಮಕಾತಿಯಾದ ಪ್ರಾಥಮಿಕ ಶಾಲಾ ಸಹಶಿಕ್ಷಕರು ಇಲಾಖೆಗೆ ಮುಜುಗರವಾಗದಂತೆ 1 ರಿಂದ 8ನೇ ತರಗತಿವರೆಗಿನ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳನ್ನು ಸಮರ್ಥವಾಗಿ ನಡೆಸಿಕೊಂಡುಬರುತ್ತಿದ್ದಾರೆ.ಸಾಮಾಜಿಕ ನ್ಯಾಯದ ಪರ ಧ್ವನಿಯಾಗಿರುವ ತಾವುಗಳು ಲಕ್ಷಾಂತರ ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯವನ್ನು ಗಂಭೀರವಾಗಿ ಪರಿಗಣಿಸಿ, ತುರ್ತಾಗಿ ಒಂದು ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸರಕಾರವನ್ನು ಒತ್ತಾಯಿಸಬೇಕು. ಈ ಮೂಲಕ ಉಲ್ಲಂಘನೆಯಾಗಿರುವ ನಿಯಮಗಳನ್ನು ಸರಿಪಡಿಸುವುದರ ಜೊತೆಗೆ ನಿರಂತರ ಸೇವಾನುಭವ ಮತ್ತು ಉನ್ನತ ವಿದ್ಯಾರ್ಹತೆ ಹೊಂದಿರುವ ಸೇವಾನಿರತ ಶಿಕ್ಷಕರಿಗೆ ಯಾವುದೇ ರೀತಿಯ ತಾರತಮ್ಯ ಹಾಗೂ ಅನ್ಯಾಯವಾಗದಂತೆ ನಿಯಮ ರೂಪಿಸಬೇಕು ಎಂದು ಆಗ್ರಹಿಸಲಾಯಿತು.

2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (1)ರ ಹೊಸ ವೃಂದ ಮತ್ತುನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲುನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ``ಪದವೀಧರ ಶಿಕ್ಷಕರೆಂದು'' ಪದನಾಮೀಕರಿಸುವುದು.

ಉಲ್ಲೇಖ (1)ರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: 1-7/8 ಕ್ಕೆ ನೇಮಕ ಹೊಂದಿದವರನ್ನು PSಖಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆ ಯೊಂದಿಗೆ ಬಡ್ತಿ ನೀಡುವುದು.

ಉಲ್ಲೇಖ (1)ರಂತೆ ಈ ಮೇಲಿನ ಪ್ರಮುಖ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ 2017ರಲ್ಲಿ ರೂಪಿತಗೊಂಡಿರುವ ಹೊಸ ವೃಂದಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದೆಂದು ಹಾಗೂ 2016ಕ್ಕಿಂತಮೊದಲು ನೇಮಕಾತಿಯಾದ ಸರ್ವರಿಗೂ ಈ ಹಿಂದಿನಂತೆ ಪ್ರೌಢ ಶಾಲೆಗಳಿಗೆ ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ನೀಡುವುದು ಹಾಗೂ ಮುಖ್ಯ ಗುರುಗಳ ಹುದ್ದೆಗಳಿಗೆ ಸೇವಾ ಜೇಷ್ಠತೆಯಂತೆ ಬಡ್ತಿ ನೀಡಬೇಕಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಗೌರವಾಧ್ಯಕ್ಷರಾದ ಕೆ.ವೀರಣ್ಣ, ಅಧ್ಯಕ್ಷರಾದ ಮಹಾಂತೇಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಹನುಮಂತಪ್ಪ, ಕೋಶಾಧ್ಯಕ್ಷರಾದ ಮಲ್ಲಿಕಾರ್ಜನ್, ಕಾರ್ಯಾದ್ಯಕ್ಷರಾದ ಕೃಷ್ಣಪ್ಪ, ಉಪಾಧ್ಯಕ್ಷರಾದ ರಮೇಶ್ ನಾಯ್ಕ್, ಶ್ರೀಮತಿ ಜಯ್ಯಮ್ಮ, ಸಹಾ ಕಾರ್ಯದರ್ಶಿ ಶಿವಮೂರ್ತಿ, ಶ್ರೀಮತಿ ಮಮತ, ಸಂಘಟನಾ ಕಾರ್ಯದರ್ಶಿ ಹನುಮಂತ ರೆಡ್ಡಿ, ಶ್ರೀಮತಿ ವಾಸಂತಿ, ಚಿತ್ರದುರ್ಗ ತಾಲ್ಲೂಕು ಸಂಘದ ಅಧ್ಯಕ್ಷರಾದ ಎಸ್.ಕೆಂಚಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

Tags :
Advertisement