Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ : ಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆ

02:52 PM Jul 26, 2024 IST | suddionenews
Advertisement

ಚಿತ್ರದುರ್ಗ. ಜು. 26:  ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ವ್ಯಸನ ಮುಕ್ತ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

Advertisement

 

ನಗರದ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಹಾಗೂ ವ್ಯಸನ ಮುಕ್ತ ಶಿಬಿರ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.  ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 01ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂದು ಬೆಳಿಗ್ಗೆ 9ಕ್ಕೆ ನಗರದ ಒನಕೆ ಓಬವ್ವ ವೃತ್ತದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಏರ್ಪಡಿಸಬೇಕು. ಜಾಗೃತಿ ಜಾಥಾವು ಒನಕೆ ಓಬವ್ವ ವೃತ್ತದಿಂದ ಮದಕರಿ ವೃತ್ತ, ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ ಬಳಿಯ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಆವರಣದವರೆಗೆ ನಡೆಸಿ, ಜಾಥಾ ಕಾರ್ಯಕ್ರಮದಲ್ಲಿ ಭಿತ್ತಿಪತ್ರ, ಜಾಗೃತಿ ಘೋಷವಾಕ್ಯಗಳ ಫಲಕಗಳನ್ನು ಪ್ರದರ್ಶಿಸಿ, ಜನರಲ್ಲಿ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ ತಿಂಗಳಿನಲ್ಲಿಯೇ ಒಂದು ಮದ್ಯ ವರ್ಜನ ಶಿಬಿರ ಏರ್ಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರಿಗೆ ಸೂಚನೆ ನೀಡಿದರು.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮದ್ಯ ಮತ್ತು ಮಾದಕ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಆಗಸ್ಟ್ ತಿಂಗಳಿನಲ್ಲಿಯೇ ವಿಚಾರ ಸಂಕಿರಣ ಹಮ್ಮಿಕೊಳ್ಳುವಂತೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿಯೂ ಕೂಡ ಆಯಾ ತಾಲ್ಲೂಕಿನ ತಹಸಿಲ್ದಾರರು ಆ. 01 ರಂದು ವ್ಯಸನಮುಕ್ತ ದಿನಾಚರಣೆಯನ್ನು ಹಮ್ಮಿಕೊಂಡು ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಬೇಕು ಈಗಾಗಲೆ ತಾಲ್ಲೂಕುಗಳ ತಹಸಿಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ಪ್ರತಿ ವರ್ಷ ಆಗಸ್ಟ್ 01ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅದರನ್ವಯ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 01ರಂದು ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ  ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸುಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಗ್ರೇಡ್-2 ತಹಶೀಲ್ದಾರ್ ನಾಗರಾಜ್ ಇದ್ದರು.

Advertisement
Tags :
ADC BT Kumaraswamy noticebengaluruchitradurgaconsumption of alcoholcreate awarenessDrugsill effectssuddionesuddione newsಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆಚಿತ್ರದುರ್ಗದುಷ್ಪಾರಿಣಾಮಗಳುಬೆಂಗಳೂರುಮದ್ಯಮಾದಕ ವಸ್ತುಗಳು ಸೇವನೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article