For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ನಗರದಲ್ಲಿ ರಸ್ತೆ ಅಗಲೀಕರಣಕ್ಕೆ ನಿರ್ಧಾರ : ಡಿಸಿ ಟಿ. ವೆಂಕಟೇಶ್

06:26 PM Dec 24, 2024 IST | suddionenews
ಚಿತ್ರದುರ್ಗ ನಗರದಲ್ಲಿ ರಸ್ತೆ ಅಗಲೀಕರಣಕ್ಕೆ ನಿರ್ಧಾರ   ಡಿಸಿ ಟಿ  ವೆಂಕಟೇಶ್
Advertisement

ಚಿತ್ರದುರ್ಗ. ಡಿ.24:  ಚಿತ್ರದುರ್ಗ ನಗರದ ಚಳ್ಳಕೆರೆ ಸರ್ಕಲ್‍ನಿಂದ ಕನಕ ಸರ್ಕಲ್‍ವರೆಗೆ ರಸ್ತೆಯ ಮಧ್ಯಭಾಗದಿಂದ 21 ಮೀಟರ್‍ಗಳ ಅಗಲೀಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

Advertisement

ಸೋಮವಾರದಂದು ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ಶಾಸಕರಾದ ವೀರೇಂದ್ರ ಪಪ್ಪಿ, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡಂತೆ ಸಭೆ ನಡೆಸಿ, ಚರ್ಚಿಸಲಾಗಿರುತ್ತದೆ.  ಚಿತ್ರದುರ್ಗ ನಗರದ ಚಳ್ಳಕೆರೆ ಸರ್ಕಲ್‍ನಿಂದ ಕನಕ ಸರ್ಕಲ್‍ವರೆಗೆ ರಸ್ತೆಯ ಮಧ್ಯ ಭಾಗದಿಂದ 21 ಮೀಟರ್‍ಗಳ ಅಗಲೀಕರಣವನ್ನು ಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ಘನ ನ್ಯಾಯಾಲಯದ ಆದೇಶಗಳು, ಸರ್ಕಾರಿ ಆದೇಶಗಳನ್ನು ಪರಿಶೀಲಿಸಿಕೊಂಡು, ತುರ್ತಾಗಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Tags :
Advertisement