For the best experience, open
https://m.suddione.com
on your mobile browser.
Advertisement

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ಅಂಗವಿಕಲ ನೌಕರರು ಸರ್ಕಾರಕ್ಕೆ ಮನವಿ

06:58 PM Nov 05, 2024 IST | suddionenews
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ಅಂಗವಿಕಲ ನೌಕರರು ಸರ್ಕಾರಕ್ಕೆ ಮನವಿ
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್. 05 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಅಂಗವಿಕಲ ನೌಕರರ ಸಂಘದ ಸದಸ್ಯರು ತಹಶಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertisement

ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಸರ್ಕಾರಿ ಅಂಗವಿಕಲ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ರಾಜ್ಯದ ಎಲ್ಲಾ ಇಲಾಖೆಗಳ ಅಂಗವಿಕಲತೆ ಉಳ್ಳ ಸರ್ಕಾರಿ ನೌಕರರನ್ನು ಪ್ರತಿನಿಧಿಸುತ್ತಿರುವ ಸರ್ಕಾರದ ಅಧಿಕೃತ ಮಾನ್ಯತೆ ಪಡೆದ ಏಕೈಕ ಸಂಘವಾಗಿದ್ದು ಕಳೆದ 40 ವರ್ಷಗಳಿಂದ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿದೆ ದಿವ್ಯಾಂಗ ನೌಕರರು ಸರ್ಕಾರಿ ಸೇವೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಾ ಬಂದಿದ್ದು ಅವರಿಗೆ ಅವರದೇ ಆದ ವಿಶೇಷ ಸೌಲಭ್ಯಗಳನ್ನು ಕಾರ್ಯನಿರ್ವಹಿಸುವ ಕಚೇರಿಯಲ್ಲಿ ಅಂಗವಿಕಲರ ಸ್ನೇಹಿ ವಾತಾವರಣ ಕಲ್ಪಿಸಿದರೆ ಪರಿಣಾಮಕಾರಿಯಾಗಿ ಹೆಚ್ಚಿನ ಉತ್ಸಾಹದಿಂದ ಸೇವೆ ಸಲ್ಲಿಸಲು ಅನುಕೂಲವಾಗುತ್ತದೆ 2016ರ ಅಂಗವಿಕಲ ವ್ಯಕ್ತಿಗಳ ಕಾಯ್ದೆ ಅನ್ವಯ ದಕ್ಕಬೇಕಾದ ಸಂವಿಧಾನಾತ್ಮಕ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಚೆನ್ನಕೇಶವ ಮಾತನಾಡಿ ಸರ್ಕಾರಿ ಇಲಾಖೆಗಳಲ್ಲಿ ದಿವ್ಯಾಂಗ ನೌಕರರು ಇತರೆ ಸರ್ಕಾರಿ ನೌಕರರಂತೆ ಶ್ರಮವಹಿಸಿ ಕೆಲಸ ನಿರ್ವಹಿಸುತ್ತಾರೆ ಎಲ್ಲ ನೌಕರರನ್ನು ಸಮಾನವಾಗಿ ಕಾಣುವಂತೆ ದಿವ್ಯಾಂಗ ನೌಕರರಿಗೆ ಸೌಲಭ್ಯಗಳನ್ನು ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ ರಾಜ್ಯದಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ಅಂಗವಿಕಲ ನೌಕರರಿಗೆ ಶೇ6 ರಷ್ಟು ಪ್ರಯಾಣ ಭತ್ಯೆಯ ಆದೇಶವನ್ನು ಕೂಡಲೇ ಹೊರಡಿಸಬೇಕು ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಅಂಗವಿಕಲ ನೌಕರರಿಗೆ ಕೇಂದ್ರ ಸರ್ಕಾರವು ಎ ಬಿ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಭರ್ತಿಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ್ದು ರಾಜ್ಯ ಸರ್ಕಾರವು ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಮಾತ್ರ ಭರ್ತಿಯಲ್ಲಿ ಮೀಸಲಾತಿ ನೀಡಿದೆ ಅದೇ ರೀತಿಯಾಗಿ ಏ ಮತ್ತು ಬಿ ವೃಂದದ ಹುದ್ದೆಗಳಿಗೂ ಬರ್ತಿಯಲ್ಲಿ ಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸುವಂತೆ ಒತ್ತಾಯಿಸಿದರು ರಾಜ್ಯದಲ್ಲಿ ವಿಕಲಚೇತನರಿಗೆ ಪ್ರಯಾಣದಲ್ಲಿ ನೀಡುತ್ತಿರುವ ಬಸ್ ಪಾಸ್ 100 ಕಿಲೋಮೀಟರ್ ಗೆ ಮಿತಿ ಗೊಳಿಸಿದ್ದು ಇದನ್ನು ಕೈ ಬಿಟ್ಟು ಶಕ್ತಿ ಯೋಜನೆ, ಮಾದರಿಯಲ್ಲಿ ಅಂಗವಿಕಲರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ರಾಜ್ಯದಲ್ಲಿನ ಅಂಗವಿಕಲರ ಸಬಲೀಕರಣಕ್ಕಾಗಿ 2016 ಅಧಿನಿಯಮದ ಅಡಿಯಲ್ಲಿ ಅಂಗವಿಕಲರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಕಲಚೇತನರ ಸಂಪನ್ಮೂಲ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ರೆಹಾನ್ ಪಾಷಾ ಮಾತನಾಡಿ ನೌಕರರು ಸಲ್ಲಿಸಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎ. ಚನ್ನಕೇಶವ, ಈ ಮಲ್ಲಿಕಾರ್ಜುನ ಓ ನಟರಾಜ್ ಓಬಣ್ಣ ಸಂಪತ್ ಕುಮಾರ್ ಶಿವಕುಮಾರ್. ಮಲ್ಲಿಕಾರ್ಜುನ ಎಚ್ ಓ ರಾಜಣ್ಣ, ರುದ್ರಮುನಿ ಪ್ರಸನ್ನ ಅನಂತಮ್ಮ, ಶಕೀಲಾ ಭಾನು ಶಿವಕುಮಾರ್ ನಾಗರಾಜ್,ವಿಜಯಕುಮಾರ್.ಎಚ್ ಜಿ. ನಾಗರಾಜ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Tags :
Advertisement