Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಕ್ಟೋಬರ್ 05 ರಂದು ಸರಕಾರಿ ಶಾಲೆಗಳಿಗೆ ಹತ್ತು ಸಾವಿರ ಉಚಿತ ಪುಸ್ತಕಗಳ ವಿತರಣೆ

06:33 PM Oct 02, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಚಿತ್ರದುರ್ಗಲ್ಲಿ ಅಕ್ಟೋಬರ್ 05 ರಂದು ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕಗಳ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

Advertisement

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಚಿನ್ಮೂಲಾದ್ರಿ ರೋಟರಿ ಕ್ಲಬ್ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕನ್ನಡ ಶಾಲೆಗಳಲ್ಲಿ ಓದುವಿಕೆಯ ಪ್ರೋತ್ಸಾಹಕ್ಕಾಗಿ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟ್ಟಸ್ವಾಮಯ್ಯ ಮತ್ತು ಸಂಘದ ಪದಾಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಇದರ ಭಾಗವಾಗಿ ಆಯ್ದ ಸರಕಾರಿ ಶಾಲೆಗಳಿಗೆ 100 ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿರುವ 100 ಪುಸ್ತಕಗಳನ್ನು ಪಟ್ಟಿ ಮಾಡಲಾಗಿದೆ. 100 ಪುಸ್ತಕಗಳ ಸೆಟ್‍ನ್ನು ಸರಕಾರಿ ಶಾಲೆಗಳಿಗೆ ವಿತರಿಸಲಾಗುವುದು. ಜಿಲ್ಲೆಯಲ್ಲಿರುವ 100 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ ಆಯ್ಕೆ ಮಾಡಿದೆ. ಈಗಾಗಲೇ ಆಯ್ಕೆಯಾದ ಶಾಲೆಗಳ ಮುಖ್ಯಶಿಕ್ಷಕರಿಗೆ ಮಾಹಿತಿಯನ್ನು ಶಿಕ್ಷಣ ಇಲಾಖೆ ನೀಡಿದೆ.

ಅಕ್ಟೋಬರ್ 5 ರ ಶನಿವಾರ ಬೆಳಗ್ಗೆ 11 ಕ್ಕೆ ಚಿನ್ಮೂಲಾದ್ರಿ ರೋಟರಿ ಬಾಲಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಸಿ.ಬಿ.ಶೈಲಾ ಜಯಕುಮಾರ್, ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಬರಹಗಾರರು ಮತ್ತು ಪ್ರಕಾಶಾಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ,ರೋಟರಿ ಅಧ್ಯಕ್ಷ ಮಂಜುನಾಥ ಭಾಗವತ್, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತಿತರರು ಕಾರ್ಯಕ್ರಮದಲ್ಲಿರಲಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷರಾದ ಕೆ.ಎಂ ಶಿವಸ್ವಾಮಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
bengaluruchitradurgaDistributiongovernment schoolsgovernment schools on October 05informationK. M. Shivaswamysuddionesuddione newsten thousand free booksಉಚಿತಉಚಿತ ಪುಸ್ತಕಗಳ ವಿತರಣೆಕೆ.ಎಂ.ಶಿವಸ್ವಾಮಿಚಿತ್ರದುರ್ಗಪುಸ್ತಕಗಳುಬೆಂಗಳೂರುಮಾಹಿತಿವಿತರಣೆಸರಕಾರಿ ಶಾಲೆಸರಕಾರಿ ಶಾಲೆಗಳುಸುದ್ದಿಒನ್ಸುದ್ದಿಒನ್ ನ್ಯೂಸ್ಹತ್ತು ಸಾವಿರ
Advertisement
Next Article