Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ : ಸಹಾಯವಾಣಿ ಪ್ರಾರಂಭ

02:55 PM Feb 21, 2024 IST | suddionenews
Advertisement

 

Advertisement

ಚಿತ್ರದುರ್ಗ. ಫೆಬ್ರವರಿ .21:  ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸಲು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದೆ.

2023-24ನೇ ಸಾಲಿಗೆ ಚಿತ್ರದುರ್ಗ  ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಘೋಷಿಸಿದ್ದು, ಬರಪೀಡಿತ ತಾಲ್ಲೂಕು ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.

Advertisement

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪನೆಗೊಂಡಿರುವ  ಸಹಾಯವಾಣಿ

08194-222538, ಚಿತ್ರದುರ್ಗ ತಾಲ್ಲೂಕು ಕಚೇರಿ 08194-222416, ಚಳ್ಳಕೆರೆ ತಾಲ್ಲೂಕು ಕಚೇರಿ 08195-250648, ಹಿರಿಯೂರು ತಾಲ್ಲೂಕು ಕಚೇರಿ 08193-263226, ಹೊಸದುರ್ಗ ತಾಲ್ಲೂಕು ಕಚೇರಿ 08199-295058, ಹೊಳಲ್ಕೆರೆ ತಾಲ್ಲೂಕು ಕಚೇರಿ 08191-200013 ಹಾಗೂ ಮೊಳಕಾಲ್ಮುರು ತಾಲ್ಲೂಕು ಕಚೇರಿ 08198-229234 ಸಹಾಯವಾಣಿ ಮೂಲಕ ತಮ್ಮ ಸಮಸ್ಯೆಗಳನ್ನು ದಾಖಲಿಸಬಹುದಾಗಿರುತ್ತದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.

Advertisement
Tags :
bengaluruchitradurgaDC Venkatesh TDrinking waterhelplinelivestockpeoplestartedsuddionesuddione newssystemಕುಡಿಯುವ ನೀರುಚಿತ್ರದುರ್ಗಜನ-ಜಾನುವಾರುಜಿಲ್ಲಾಧಿಕಾರಿ ಟಿ.ವೆಂಕಟೇಶ್ಬೆಂಗಳೂರುವ್ಯವಸ್ಥೆಸಹಾಯವಾಣಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article