For the best experience, open
https://m.suddione.com
on your mobile browser.
Advertisement

ಶಿಕ್ಷಣಕ್ಕೆ ಬಡತನ, ಸಿರಿತನ ತಾರತಮ್ಯವಿಲ್ಲ :  ಪಪಂ ಸದಸ್ಯ ಜೆ.ಆರ್.ರವಿಕುಮಾರ್

02:34 PM Jun 11, 2024 IST | suddionenews
ಶಿಕ್ಷಣಕ್ಕೆ ಬಡತನ  ಸಿರಿತನ ತಾರತಮ್ಯವಿಲ್ಲ    ಪಪಂ ಸದಸ್ಯ ಜೆ ಆರ್ ರವಿಕುಮಾರ್
Advertisement

ನಾಯಕನಹಟ್ಟಿ;ಜೂ.11 : ಶೈಕ್ಷಣಿಕ ಪ್ರಗತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಪಟ್ಟಣ ಪಂಚಾಯತಿ ಸದಸ್ಯ ಜೆ.ಆರ್.ರವಿಕುಮಾರ್ ಹೇಳಿದರು.

Advertisement

ಪಟ್ಟಣದಲ್ಲಿ ಶಾಲಾ ಪರೀಕ್ಷೆ ಮೌಲ್ಯಾಂಕ ಮತ್ತು ನಿರ್ಣಯ ಮಂಡಳಿ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪನವರ ಅಭಿಮಾನಿ ಬಳಗದ ವತಿಯಿಂದ ಮಾದಿಗ ಸಮುದಾಯದ ಎಸ್‍ಎಸ್‍ಎಲ್‍ಸಿ, ಪಿಯುಸಿ ಯಲ್ಲಿ ಶೇ.90ಕ್ಕು ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣಕ್ಕೆ ಬಡತನ, ಸಿರಿತನದ ತಾರತಮ್ಯವಿಲ್ಲ. ಪರಿಶ್ರಮ ಮತ್ತು ಸತತ ಪ್ರಯತ್ನ ಅಗತ್ಯ. ಗ್ರಾಮೀಣ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಕರೊಂದಿಗೆ ಪೋಷಕರ ಸಹಕಾರ ಅಗತ್ಯವಾಗಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಮಕ್ಕಳ ಪೋಷಕರ ಅನಕ್ಷರತೆ, ಜೀವನ ನಡೆಸಲು ಕಷ್ಟದ ಪರಿಸ್ಥಿಯಲ್ಲಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಇಂತಹ ಕೆಲಸವನ್ನು ಮಾಡಬಾರದು. ಸರ್ಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಂಡು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು ಎಂದರು.

Advertisement

ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಪೋಷಕರು, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಇತರೆ ಎಲ್ಲಾ ಸಮುದಾಯದ ಬಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಹೆಚ್ಚಾಗಬೇಕಿದೆ ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಚನ್ನಕೇಶವ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಶಿಕ್ಷಕರೊಂದಿಗೆ ಪಾಲಕರು ಸಹಕರಿಸಬೇಕು. ಹಿಂದುಳಿದ ಮಕ್ಕಳಿಗೆ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದರು.

ಮುಖ್ಯಶಿಕ್ಷಕರಾದ ಎನ್.ಮಹಂತೇಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರ ಅತ್ಯಂತ ಮಹತ್ವತೆಯಿಂದ ಕೂಡಿದೆ. ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಮಕ್ಕಳಲ್ಲಿ ಬೆಳೆಯಬೇಕಾದರೆ ಮನೆಯ ಪರಿಸರ ಹಾಗೂ ಶಾಲೆಯ ಪರಿಸರ ಎರಡೂ ಅತಿ ಮುಖ್ಯ. ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ ಪಠ್ಯದಷ್ಟೇ ಇತರೆ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಲ್ಲಿ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.
ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಮಂಜುಶ್ರೀ, ವರುಣಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಂಕರಸ್ವಾಮಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಆರ್.ಶ್ರೀಕಾಂತ್, ಮರಿಪಾಲಯ್ಯ, ಮುಖಂಡರಾದ ತಾರಕೇಶ್, ಮಲ್ಲಿಕಾರ್ಜುನ್, ಎಂ.ಅಜಯ್, ರಾಕೇಶ್, ಅಖಿಲೇಶ್ ಉಪಸ್ಥಿತರಿದ್ದರು.

Advertisement
Tags :
Advertisement