Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

85 ವರ್ಷ ದಾಟಿದ ಹಿರಿಯರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ : ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

01:04 PM Apr 10, 2024 IST | suddionenews
Advertisement

ಚಿತ್ರದುರ್ಗ. ಏ.10: 85 ವರ್ಷ ದಾಟಿದ ಹಿರಿಯ ನಾಗರೀಕರಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಇದರೊಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಹಿರಿಯರು ನಾಗರಿಕರು ಮತದಾನ ಮಾಡಲು ಅನುಕೂಲವಾಗುವಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.

Advertisement

ಸೋಮವಾರ ಸಂಜೆ ನಗರದ ಕೆಳಗೋಟೆಯ ಸಿ. ಕೆ ಪುರ ಬಡಾವಣೆಯಲ್ಲಿರುವ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು‌.

ಏಪ್ರಿಲ್ 26 ರಂದು ನಡೆಯುವ ಮತದಾನ ಎನ್ನುವ, ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರು ಪಾಲ್ಗೊಂಡು ತಮ್ಮ ಮತದಾನ ಹಕ್ಕು ಚಲಾಯಿಸಬೇಕು. ಪ್ರತಿ 5 ವರ್ಷಕೊಮ್ಮೆ ಬರುವ ಈ ಹಬ್ಬದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರುಳ್ಳ 18 ವರ್ಷ ತುಂಬಿದ ಪುರುಷ ಮತ್ತು ಮಹಿಳೆಯರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಸುವರ್ಣ ಅವಕಾಶವನ್ನು ಯಾರು ಕೈಚೆಲ್ಲಬಾರದು ಎಂದರು.

Advertisement

ಕುಟುಂಬದಲ್ಲಿ ಗೌರವ, ಪ್ರೀತಿ ಮತ್ತು ಮಮತೆ ಇವೆಲ್ಲವನ್ನು ಕಾಪಾಡಿಕೊಂಡು ಬಂದಿರುವ ಹಿರಿಯರು, ಮನೆಯ ಎಲ್ಲ ಸದಸ್ಯರು ಹಾಗೂ ಸ್ನೇಹಿತರು, ಬಂಧು ಬಳಗದವರು ಮತದಾನ ಮಾಡುವಂತೆ ತಿಳಿ ಹೇಳಬೇಕು. ನಿಮ್ಮ ಜೀವನದಲ್ಲಿ ಬಹಳಷ್ಟು ಚುನಾವಣೆಗಳನ್ನು ನೋಡಿದ್ದೀರಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇಕಡ.70/% ರಷ್ಟು ಮತದಾನವಾಗಿತ್ತು. ಈ ಬಾರಿ ಶೇಕಡ.5% ರಷ್ಟು ಮತದಾನದ ಪ್ರಮಾಣ ಹೆಚ್ಚು ಮಾಡಲು ಗುರಿ‌ ಹೊಂದಲಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಎಸ್.ಜೆ.ಸೋಮಶೇಖರ್ ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ದಾಟಿದ ವೃದ್ಧರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗಿತ್ತು. ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಯೋಮಿತಿಯನ್ನು 85 ವರ್ಷಕ್ಕೆ ಏರಿಕೆ ಮಾಡಿದೆ. ಜಿಲ್ಲೆಯಲ್ಲಿ 85 ವರ್ಷ ದಾಟಿದ 11,827 ಮತದಾರರು ಇದ್ದಾರೆ. ಬೇಸಿಗೆಯ ಬಿಸಿಲಿನಲ್ಲಿ ಮತಗಟ್ಟೆಗೆ ಬರಲು ತೀವ್ರ ಸಮಸ್ಯೆ ಎದುರಿಸುತಿದ್ದ ವಯೋವೃದ್ಧರು, ಹಾಸಿಗೆ ಹಿಡಿದವರು ಮನೆಯಿಂದ ಮತದಾನ ಮಾಡಬಹದು. ಮತಗಟ್ಟೆ ಕೇಂದ್ರಗಳಿಗೆ ಬರುವ ಹಿರಿಯ ನಾಗರಿಕರಿಗೆ ವೀಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಇದರೊಂದಿಗ ಅಗತ್ಯ ವೈದ್ಯಕೀಯ ಸಿಬ್ಬಂದಿಗಳನ್ನು ಸಹ ನೇಮಕ ಮಾಡಲಾಗಿರುತ್ತದೆ. ಆದ್ದರಿಂದ ಯಾರು ಮತದಾನದಿಂದ ವಂಚಿತರಾಗದೆ ಮತದಾನ ಮಾಡುವಂತೆ ಎಸ್.ಜೆ.ಸೋಮಶೇಖರ್ ಕೋರಿದರು.

ಇದೇ ವೇಳೆ ಮತದಾರ ಪ್ರತಿಜ್ಞಾ ವಿಧಿಯನ್ನು ಎಸ್.ಜೆ.ಸೊಮಶೇಖರ್ ಭೋದಿಸಿದರು. ಕಾರ್ಯಕ್ರಮದಲ್ಲಿ ಉಪ ಕಾರ್ಯದರ್ಶಿ ಕೆ. ತಿಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್, ನಗರ ಸಭೆಯ ಆಯುಕ್ತೆ ರೇಣುಕಾ,ಜಿಲ್ಲಾ ಸ್ವೀಪ್ ಸಮಿತಿಯ ಸಂಯೋಜಕಿ ಸುಷ್ಮಾರಾಣಿ,ಈಶ್ವರಿ ವಿಶ್ವವಿದ್ಯಾಲಯದ ರಶ್ಮಿ‌ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Tags :
bengaluruchitradurgasuddionesuddione newsvote from homezp CEO S. J. Somashekharಅವಕಾಶಚಿತ್ರದುರ್ಗಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ಬೆಂಗಳೂರುಮತದಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article