Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಬಹಳ ಮಹತ್ವವಿದೆ : ಇಲ್ಯಾಸ್‍ಉಲ್ಲಾ ಷರೀಪ್

04:04 PM Jul 01, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 01 : ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಬಹಳ ಮಹತ್ವವಿದೆ. ಚುನಾವಣೆ ಸುಗುಮವಾಗಿ ನಡೆಯಲು ಸಹಕಾರ ಸಂಘಗಳ ಕಾರ್ಯನಿರ್ವಾಹಕರಾದ ನಿಮ್ಮ ಜವಾಬ್ದಾರಿ ಬಹಳ ಮುಖ್ಯ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರಾದ ಇಲ್ಯಾಸ್‍ಉಲ್ಲಾ ಷರೀಪ್ ತಿಳಿಸಿದರು.

Advertisement

ಚಿತ್ರದುರ್ಗ ನಗರದ ಕೆಳಗೋಟೆಯಲ್ಲಿನ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.ದ ಸಹಕಾರ ಭವನದಲ್ಲಿ ಸೋಮವಾರ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ.ಚಿತ್ರದುರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿವಿಧಾನಗಳ ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಹಕಾರ ಚುನಾವಣೆ ದಿನಾಂಕದ 5 ವರ್ಷಗಳಲ್ಲಿ 2 ವಾರ್ಷಿಕ ಮಹಾಸಭೆಗೆ ಹಾಜರಾದಲ್ಲಿ ಚುನಾವಣೆ ಮತದಾನಕ್ಕೆ ಅರ್ಹರಾಗಿರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗೆ ಬಹಳ ಮಹತ್ವವಿದೆ. ಚುನಾವಣೆ ಸುಗುಮವಾಗಿ ನಡೆಯಲು ಸಹಕಾರ ಸಂಘಗಳ ಕಾರ್ಯನಿರ್ವಾಹಕರಾದ ನಿಮ್ಮ ಜವಾಬ್ದಾರಿ ಬಹಳ ಮುಖ್ಯ.  ಕಾನೂನು ಏನು ಹೇಳುತ್ತದೆ ಅದನ್ನು ಅರ್ಥಮಾಡಿಕೊಂಡು ಕೆಲಸಮಾಡಬೇಕು.  ಚುನಾವಣೆ ಕುರಿತು ನೀಡುವ ಉಪನ್ಯಾಸವನ್ನು ಸಂಘದ ಪ್ರತಿನಿಧಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ದೇಶದಾದ್ಯಂತ ಕಂಪ್ಯೂಟರೈಸೇಷನ್  ಆಗುತ್ತಿದ್ದು, ನಮ್ಮ ಚಿತ್ರದುರ್ಗ ಜಿಲ್ಲೆಯಲ್ಲಿ 158 ಸಹಕಾರ ಸಂಘಗಳಲ್ಲಿ 148 ಪಿಎಸಿಎಸ್ ಸಹಕಾರ ಸಂಘಗಳಿಗೆ ಕಂಪ್ಯೂಟರೈಸೇಷನ್ ಅಳವಡಿಕೆ ಕೆಲಸ ನಡೆಯುತ್ತಿದೆ.  ಇದರಿಂದ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಬರುತ್ತದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾದ ಆರ್.ರಾಮರೆಡ್ಡಿ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿಂದ ಇನ್ನು ಹೆಚ್ಚಿನ ಒಳ್ಳೆಯ ತರಬೇತಿ ಕಾರ್ಯಕ್ರಮಗಳನ್ನು ನಿಯೋಜಿಸಲಾಗುವುದು ತಾವುಗಳು ಚುನಾವಣೆ ನಡೆಸುವ ಬಗ್ಗೆ  ಈ ತರಬೇತಿಯ ಉಪನ್ಯಾಸಕರಿಂದ ಮಾಹಿತಿಯನ್ನು ಪಡೆದುಕೊಳ್ಳಿ ಹಾಗೂ ಇದರ ಸದುಪಯೋಗಪಡೆದುಕೊಳ್ಳಬೇಕು  ನೀವು ಇದೇ ರೀತಿ ಸಹಕಾರ ನೀಡಿದರೆ ನಮ್ಮ ಮಹಾಮಂಡಳದಿಂದ ಇಂತಹ ತರಬೇತಿಗಳನ್ನು ನೀಡಲು ನಾವು ಸಿದ್ದರಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಂಕಲು ಬಸವರಾಜ್ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಚುನಾವಣೆ ವಿಚಾರದಲ್ಲಿ ಯಾವುದೇ ಗೊಂದಲವಾಗದಂತೆ ಸಹಕಾರ ಸಂಘಗಳಲ್ಲಿ ಚುನಾವಣೆ ನಡೆಸುವ ಸಲುವಾಗಿ ಈ ದಿವಸ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಚುನಾವಣೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಬೇಕು ನಮ್ಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತಾಪಿ ವರ್ಗಕ್ಕೆ, ಬಡವರಿಗೆ ಮತ್ತು ಮಹಿಳೆಯರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು.

ಸಂಘದ ಮುಖ್ಯಕಾರ್ಯನಿರ್ವಾಹಕರಿಗೆ ಉತ್ತಮವಾಗಿ ಜ್ಞಾನ ಹೊಂದಿದ ಸಿಬ್ಬಂದಿಗಳನ್ನು ಸಂಘದ ಆಡಳಿತ ಮಂಡಳಿ ನೇಮಕಮಾಡಿಕೊಂಡು , ಸಂಘದಲ್ಲಿ ಹೊಸ ಹೊಸ ಬಗೆಯ ತಿದ್ದುಪಡಿಗಳನ್ನು ಮಾಡಿಕೊಂಡು ಸಂಘವನ್ನು ಲಾಭಾಂಶ ಬರುವಂತೆ ಕೆಲಸ ನಿರ್ವಹಿಸಬೇಕು ಸಂಘವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಯೂನಿಯನ್ನಿನ ಅಧ್ಯಕ್ಷರಾದ ಹೆಚ್.ಎಂ.ದ್ಯಾಮಣ್ಣ ಮಾತನಾಡಿ ಯಾರು ಕೂಡ ಇಂತಹ ತರಬೇತಿಯನ್ನು ನಿರ್ಲಕ್ಷ ಮಾಡದೇ ಚುನಾವಣೆ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಹಾಗೂ ಇದೇ ರೀತಿ ಮುಂದಿನ ತರಬೇತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಿ ಎಂದರು.

ಈ ಕಾರ್ಯಕ್ರಮದಲ್ಲಿ ಯೂನಿಯನ್ನಿನ ನಿರ್ದೇಶಕರುಗಳಾದ ಜೆ.ಶಿವಪ್ರಕಾಶ್, ಮಾತೃಶ್ರೀ ಎನ್.ಮಂಜುನಾಥ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಸಹಾಯಕ ನಿರ್ದೇಶಕರಾದ ಪಿ.ಅಂಜನಮೂರ್ತಿ, ಸಹಕಾರ ಸಂಘಗಳ ನಿರೀಕ್ಷಕರುಗಳಾದ ಎಸ್. ಸಂಜಯ್ ರಾಮ್ ಮತ್ತು  ರಾಮು,  ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಶಂಕರಮೂರ್ತಿ ಹಿಮಂತರಾಜ್ ಎಂ., ಹಾಗೂ ಚಿತ್ರದುರ್ಗ, ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.

ಈ ತರಬೇತಿಗೆ ಉಪನ್ಯಾಸಕರಾಗಿ ಚಿಕ್ಕಮಗಳೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕರು (ನಿವೃತ್ತ), ಎಸ್.ವಿ.ಬಸವರಾಜ್, ಸಹಕಾರ ಸಂಘಗಳ ಚುನಾವಣೆ ಜರುಗಿಸುವ ವಿಧಿವಿಧಾನಗಳ ಕುರಿತು ಉಪನ್ಯಾಸ ನೀಡಿದರು ರೈತಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಮುಖ್ಯಕಾರ್ಯನಿರ್ವಹಣಾಧಿಕಾರಿ  ನಾಗರಾಜ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Advertisement
Tags :
bengaluruchitradurgademocracyelectionsIlyasullah Sharifimportantsuddionesuddione newsಇಲ್ಯಾಸ್‍ಉಲ್ಲಾ ಷರೀಪ್ಚಿತ್ರದುರ್ಗಚುನಾವಣೆಪ್ರಜಾಪ್ರಭುತ್ವಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article