ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಜೋಪಾನ ಮಾಡಿ : ದಿನೇಶ್ ಪೂಜಾರಿ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತುರುವನೂರು ವಲಯದ ಚಿಪ್ಪಿನಕೆರೆ ಕಾರ್ಯಕ್ಷೇತ್ರದಲ್ಲಿ ರೇವಣ್ಣನವರ ಜಮೀನಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡುತ್ತ ಗಿಡ-ಮರಗಳನ್ನು ನಾಶಪಡಿಸುವುದರಿಂದ ಪರಿಸರ ನಾಶವಾಗುವುದಲ್ಲದೆ ಸಕಲ ಜೀವರಾಶಿಗಳು ತೊಂದರೆ ಅನುಭವಿಸುವಂತಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಜೋಪಾನ ಮಾಡಿ ದೊಡ್ಡ ಮರವನ್ನಾಗಿ ಬೆಳೆಸಿದಾಗ ಉಸಿರಾಟಕ್ಕೆ ಶುದ್ದವಾದ ಗಾಳಿ ದೊರಕುತ್ತದೆ ಎಂದು ಹೇಳಿದರು.
ಚಿಕ್ಕಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್, ಅಭಿವೃದ್ದಿ ಅಧಿಕಾರಿ ಚೈತ್ರ, ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಅಜ್ಜಪ್ಪ, ಪ್ರಕಾಶ್, ಮಧು
ಕೃಷಿ ಮೇಲ್ವಿಚಾರಕಿ ಅನಿತಾ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರುಗಳು ಸಾಮಾಜಿಕ ಅರಣ್ಯೀಕರಣದಲ್ಲಿ ಭಾಗವಹಿಸಿದ್ದರು.