Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಿಜ್ಞಾನ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಹೊಸ ಆವಿಷ್ಕಾರ ಮತ್ತು ಸಂಶೋಧನೆಗೆ ಆಸಕ್ತಿ ಹೆಚ್ಚುತ್ತದೆ : ಡಿ.ಆರ್.ಡಿ.ಓ. ವಿಜ್ಞಾನಿ ಡಾ.ಆರ್.ಮಹೇಶ್‍ಬಾಬು

05:19 PM Dec 16, 2023 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.16 : ವಿಜ್ಞಾನ ವಸ್ತು ಪ್ರದರ್ಶನದಿಂದ ಹೊಸ ಹೊಸ ಆವಿಷ್ಕಾರ, ಸಂಶೋಧನೆ ಕಡೆಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸುತ್ತದೆ ಎಂದು ಚಳ್ಳಕೆರೆಯ ಕುದಾಪುರ ಸಮೀಪವಿರುವ ಡಿ.ಆರ್.ಡಿ.ಓ. ವಿಜ್ಞಾನಿ ಡಾ.ಆರ್.ಮಹೇಶ್‍ಬಾಬು ತಿಳಿಸಿದರು.

ಚಳ್ಳಕೆರೆ ಟೋಲ್‍ಗೇಟ್‍ನಲ್ಲಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಐದರಿಂದ 12 ನೇ ತರಗತಿಯ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಗಾಟಿಸಿ ಮಾತನಾಡಿದರು.

Advertisement

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಬೇರೆ ಬೇರೆ ಶಾಲೆಯ ಮಕ್ಕಳಿಗೆ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಲು ವೇದಿಕೆ ಕಲ್ಪಿಸಿದೆ. ಇದರಿಂದ ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ಸಹಕಾರಿಯಾಗಲಿದೆ. ವಸ್ತು ಪ್ರದರ್ಶನದಲ್ಲಿ ಬಹುಮಾನ ಗೆಲ್ಲುವುದು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಅತ್ಯವಶ್ಯಕ. 158 ಬಗೆಯ ವಿಜ್ಞಾನ ಮಾದರಿಗಳನ್ನು ಮಕ್ಕಳು ಸಿದ್ದಪಡಿಸಿರುವುದು ಸುಲಭದ ಮಾತಲ್ಲ ಎಂದು ಶ್ಲಾಘಿಸಿದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಅಕಾಡೆಮಿಕ್ ಕೋ-ಆರ್ಡಿನೇಟರ್ ಆರ್.ಎಸ್.ರಾಜು ಮಾತನಾಡಿ ಹದಿನೈದು ದಿನಗಳ ಹಿಂದೆ ಈ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದು ಇಷ್ಟಕ್ಕೆ ನಿಲ್ಲಬಾರದೆಂಬ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಚಂದ್ರಕಲಾರವರ ಆಸೆಯಂತೆ ಈಗ ಮಕ್ಕಳಿಗೆ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಇದರಿಂದ ಮಕ್ಕಳ ಪೂರಕ ಬೆಳವಣಿಗೆಗೆ ಸಹಕಾರಿಯಾಗಲಿದೆ.

ವಿಜ್ಞಾನ ತಂತ್ರಜ್ಞಾನದಲ್ಲಿ ಆವಿಷ್ಕಾರವಾಗುತ್ತಿರುವುದಕ್ಕೆ ಮಕ್ಕಳು ಹೊಂದಿಕೊಳ್ಳಬೇಕು ಎಂದು ಹೇಳಿದರು.
ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಹೆಚ್.ಎಸ್.ಟಿ.ಸ್ವಾಮಿ ಮಾತನಾಡುತ್ತ ಇದು ವಿಜ್ಞಾನ ಯುಗವಾಗಿರುವುದರಿಂದ ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನ ವಸ್ತು ಪ್ರದರ್ಶನಗಳಿಂದ ಮಕ್ಕಳಲ್ಲಿ ವಿಜ್ಞಾನದ ಕಡೆ ಕುತೂಹಲ ಮೂಡುತ್ತದೆ. ಇದರಿಂದ ವೈವಿಧ್ಯಮಯ ಚಟುವಟಿಕೆ ನಡೆಸಿಕೊಂಡು ಹೋಗಲು ನೆರವಾಗಲಿದೆ ಎಂದರು.

ಡಿ.ಆರ್.ಡಿ.ಓ. ವಿಜ್ಞಾನಿ ಡಾ.ಸಲೀಂ ಸಜಾದ್ ವಿಜ್ಞಾನ ವಸ್ತು ಪ್ರದರ್ಶನ ಕುರಿತು ಮಾತನಾಡಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಚಂದ್ರಕಲಾ ಹೆಚ್. ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಪ್ರಾಂಶುಪಾಲರಾದ ಡಾ. ಇ.ರುದ್ರಮುನಿ ವೇದಿಕೆಯಲ್ಲಿದ್ದರು.

Advertisement
Tags :
chitradurgaDr. R. MaheshbabuDRDO ScientistExhibition of science objectsnew inventions and researchಚಿತ್ರದುರ್ಗಡಾ.ಆರ್.ಮಹೇಶ್‍ಬಾಬುಡಿ.ಆರ್.ಡಿ.ಓ. ವಿಜ್ಞಾನಿವಿಜ್ಞಾನ ವಸ್ತು ಪ್ರದರ್ಶನಹೊಸ ಆವಿಷ್ಕಾರ ಮತ್ತು ಸಂಶೋಧನ
Advertisement
Next Article