Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಾಧ್ಯಮಗಳಲ್ಲಿಂದು ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ ದಂದೆ ನಡೆಯುತ್ತಿದೆ : ರವಿ ಹೆಗಡೆ

06:56 PM Jul 13, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ.13 : ಪ್ರಸಕ್ತ ಸಮಾಜದಲ್ಲಿ ಮಾಧ್ಯಮ ಎನ್ನುವುದು ಭ್ರಷ್ಟಾಚಾರ ಮಾಡಲು ಸಲಕರಣೆಯಾಗಿ ಬಳಕೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರು ನಮ್ಮ ನಡುವೆಯೇ ಇದ್ದಾರೆ. ಇಂತಹವರನ್ನು ಹುಡುಕಿ ಸಮಾಜದ ಎದುರು ಬಯಲು ಮಾಡಬೇಕು  ಎಂದು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ, ನಗರದ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ “ಪತ್ರಿಕಾ ದಿನಾಚರಣೆ”ಯಲ್ಲಿ ಭಾಗವಹಿಸಿ ಅವರು ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.

Advertisement

ಜುಲೈ ಒಂದನೇ ತಾರೀಖನ್ನು ಪತ್ರಿಕಾ ದಿನಾಚರಣೆ ಎನ್ನುವ ಬದಲು ಮಾಧ್ಯಮ ದಿನಾಚರಣೆ ಎಂದು ಕರೆದರೆ ಹೆಚ್ಚು ಅರ್ಥಪೂರ್ಣ ಎನಿಸುತ್ತದೆ. ಏಕೆಂದರೆ ಮೊದಲ ಪತ್ರಿಕೆ ಪ್ರಾರಂಭವಾದ ದಿನಗಳಲ್ಲಿ ಮುದ್ರಣ ಮಾಧ್ಯಮ ಅಸ್ತಿತ್ವದಲ್ಲಿತ್ತು.  ಆದರೆ ಈಗ ಟಿ.ವಿ. ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮವೂ ಕೂಡ ಅಸ್ತಿತ್ವದಲ್ಲಿರುವುದರಿಂದ, ಮಾಧ್ಯಮ ದಿನಾಚರಣೆ ಎನ್ನುವುದು ಸೂಕ್ತ.  ಈ ದಿನವನ್ನು ಆತ್ಮಾವಲೋಕ ದಿನವಾಗಿ ಆಚರಿಸಬೇಕು. ವೃತ್ತಿಪರತೆಯನ್ನು ಅಳವಡಿಸಕೊಳ್ಳುವ ಮೂಲಕ ಸಮಾಜವನ್ನು ಸರಿದಾರಿಯಲ್ಲಿ ತರಲು ಪ್ರಯತ್ನಿಸಬೇಕು ಎಂದರು.

ಮಾಧ್ಯಮಗಳಲ್ಲಿಂದು ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ ದಂದೆ ನಡೆಯುತ್ತಿದೆ. ಭ್ರಷ್ಟಾಚಾರಾದ ಕುರಿತು ಪ್ರಕಟವಾದ ಸುದ್ದಿಗಳಿಗಿಂತ, ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಯೋಚಿಸುವ ಅನಿವಾರ್ಯತೆಯಿದೆ. ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರನ್ನು ಖಂಡಿಸಬೇಕು. ಪತ್ರಕರ್ತರ ಸಂಘಗಳು ಇಂತಹವರಿಗೆ ಮನ್ನಣೆ ನೀಡಬಾರದು ಎಂದು ರವಿ ಹೆಗಡೆ ಹೇಳಿದರು.

ಸರ್ಕಾರಗಳನ್ನು ಸರಿದಾರಿಗೆ ತರುವ ಶಕ್ತಿ ಮಾಧ್ಯಮಗಳಿಗಿದೆ. ಹಗರಣಗಳನ್ನು ಬಯಲಿಗೆ ಎಳೆಯುವ ಮೂಲಕ ಭ್ರಷ್ಟಾಚಾರನ್ನು ತಡೆಗಟ್ಟಬಹದು. ರಾಜ್ಯದಲ್ಲಿ ನಡೆದ ಪಿ.ಎಸ್.ಐ ನೇಮಕಾತಿ ಹಗರಣವನ್ನು ಮಾಧ್ಯಮಗಳು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದವು. ಇದರಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನವಾಯಿತು ಎಂದರು.

Advertisement
Tags :
bengaluruchitradurgaextortionmediaraidRavi Hegdesting operationsuddionesuddione newsಚಿತ್ರದುರ್ಗಬೆಂಗಳೂರುಮಾಧ್ಯಮಗಳುರವಿ ಹೆಗಡೆವಸೂಲಿ ದಂದೆಸುದ್ದಿಒನ್ಸುದ್ದಿಒನ್ ನ್ಯೂಸ್ಸ್ಟಿಂಗ್ ಆಪರೇಷನ್
Advertisement
Next Article