Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸರ್ಕಾರಿ ಇಲಾಖೆಗಳಲ್ಲಿ ಮೀತಿ ಮೀರಿದ ಭ್ರಷ್ಟಾಚಾರ : ಕೆಟಿ ತಿಪ್ಪೇಸ್ವಾಮಿ ಆರೋಪ

05:28 PM Nov 04, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ನವೆಂಬರ್. 04 : ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಮೀತಿ ಮೀರಿದ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಆರೋಪಿಸಿದರು.

Advertisement

ನಗರದ ರೈತ ಸಂಘದ ಕಛೇರಿಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಭ್ರಷ್ಟಾಚಾರದ ಬಗ್ಗೆ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಅಲ್ಲದೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

Advertisement

ರೈತರ ಹೆಸರಿನಲ್ಲಿ ಪಿ ಎಂ ಸಿ ಕಂಪನಿ ಹಾಗೂ ಉಪಗುತ್ತಿಗೆದಾರರು ನಿಯಮ ಉಲ್ಲಂಘನೆ ಮಾಡಿ ಸರ್ಕಾರಕ್ಕೆ ನೂರಾರು ಕೋಟಿ ತೆರಿಗೆ ಕಟ್ಟದೆ ವಂಚಿಸುತ್ತಿರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗು ಪತ್ರ ಬರೆದರು ಕ್ರಮ ವಹಿಸದೆ ಅಧಿಕಾರಿಗಳು ಕಂಪನಿಯೊಂದಿಗೆ ಶಾಮಿಲ್ ಆಗಿ ನಿರಂತರವಾಗಿ ಅಕ್ರಮ ನಡೆಯಲು ಶಾಮೀಲಾಗಿದ್ದಾರೆ ಎಂದು ತಿಳಿಸಿದರು.

ನ. 13ರಂದು ಭ್ರಷ್ಟಾಚಾರ ಅಧಿಕಾರಿಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದು, ಅಂದು, ಸಚಿವರು ಧರಣಿ ಸ್ಥಳಕ್ಕೆ ಬಂದರೆ ದಾಖಲೆ ಸಮೇತ ನೀಡಲಾಗುವುದು. ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾಮಗಾರಿ ನಡೆಸದೆ ಹಣ ಪಡೆದಿರುವ ಬಗ್ಗೆ ದಾಖಲೆಗಳನ್ನು ನೀಡುತ್ತೇವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳಾದ ಕಂದಾಯ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಇಂಧನ, ಅಬಕಾರಿ ಹಾಗೂ ಅರಣ್ಯ ಇಲಾಖೆಗಳ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ತಾಲೂಕಿನಲ್ಲಿ ನಿಜವಾದ ಫಲಾನುಭವಿಗಳಿಗೆ ಬಗರ್ ಹಕುಂ ಸಾಗುವಳಿ ಹಕ್ಕು ಪತ್ರ ಕೊಡದೆ ಭೂಗಳ್ಳರಿಗೆ, ರಾಜಕೀಯ ಮುಖಂಡರಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂದರು.

ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದ್ದು, ಜವನಗೊಂಡನಹಳ್ಳಿ ಹಾಗೂ ಐಮಂಗಲ ಹೋಬಳಿ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಡಿಸೆಂಬರ್ 9/12/2024ರಂದು ಹಿರಿಯೂರು ಬಂದ್ ಹಮ್ಮಿಕೊಳ್ಳು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಪ್ಪೇಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ರೈತ ಮುಖಂಡ ಆಲೂರು ಸಿದ್ದರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ಆರ್.ಕೆ.ಗೌಡ, ನಾಗರಾಜಪ್ಪ, ತಿಮ್ಮಾರೆಡ್ಡಿ, ರಂಗಸ್ವಾಮಿ, ಶಿವಣ್ಣ, ಜಯಣ್ಣ, ರಂಗಸ್ವಾಮಿ, ಜಯಣ್ಣ, ಬಾಷಾ, ಬಾಲಕೃಷ್ಣ, ರಾಮಣ್ಣ, ತಿಪ್ಪೇಸ್ವಾಮಿ, ರಾಮಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.

Advertisement
Tags :
bengaluruchitradurgaExtreme corruptiongovernment departmentsKT Thippeswamysuddionesuddione newsಕೆಟಿ ತಿಪ್ಪೇಸ್ವಾಮಿಚಿತ್ರದುರ್ಗಬೆಂಗಳೂರುಮೀತಿ ಮೀರಿದ ಭ್ರಷ್ಟಾಚಾರಸರ್ಕಾರಿ ಇಲಾಖೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article