Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ ವಿಜೃಂಭಣೆಯ ರಾಯರ 357ನೇ ಆರಾಧನಾ ಮಹೋತ್ಸವ

09:41 AM Aug 22, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ : ನಗರದಲ್ಲಿ ರಾಯರ 357ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ಆನೆ ಬಾಗಿಲ ಬಳಿಯಲ್ಲಿನ ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ನಂಜನಗೂಡು ಶ್ರೀ ರಘವೇಂದ್ರ ಸ್ವಾಮಿಗಳವರ ಬೃಂದಾವನ ಸನ್ನಿಧಾನದ  ರಾಯರ ಮಠದಲ್ಲಿ ಮಧ್ಯಾರಾಧನೆ ಜನರ ಭಕ್ತಿ ಭಾವಕ್ಕೆ ಪರವಶವಾಗಿದೆ. ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಮಠಕ್ಕೆ ಆಗಮಿಸಿ ರಾಯದ ದರ್ಶನ ಪಡೆದರು.

Advertisement

ರಾಯರ ಮಂತ್ರಾಲಯದಲ್ಲಿ ದೇವರ ಧ್ಯಾನದಲ್ಲಿರುವ ರಾಯರ ಕಣ್ಣು ಭಕ್ತರ ಕಡೆ ದೃಷ್ಟಿ ಹಾಯಿಸಿದ್ದು, ಹೀಗಾಗಿ ಅಧಿಕ ಸಂಖ್ಯೆಯಲ್ಲಿ ಇಂದು ಭಕ್ತರು ಸೇರ್ಪಡೆಯಾಗಲಿದ್ದಾರೆ. ಅದರಂತೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಯರ ಕೃಪಾಕಟಾಕ್ಷಕ್ಕೆ ಒಳಗಾಗಿದ್ದಾರೆ.  ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ರಾಯರು ಜೀವಂತವಾಗಿ ವೃಂದಾವನ ಪ್ರವೇಶವಾದ ದಿನವೇ ಮಧ್ಯಾರಾಧನೆ ಆಗಿದೆ.

 

ಮಧ್ಯಾರಾಧನೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ಶ್ರೀ ಮಠದಲ್ಲಿ ನಡೆದವು  ಇವತ್ತು ಮಂತ್ರಾಲಯದ ರಾಯರ ಮಠದಲ್ಲಿ ಮಧ್ಯಾರಾಧನೆ ನಡೆದಿದ್ದು, ರಾಯರ ಆರಾಧನಾ ಮಹೋತ್ಸವದಲ್ಲಿ ಪೂರ್ವಾರಾಧನೆ, ಮಧ್ಯಾರಾಧನೆ ಹಾಗೂ ಉತ್ತರಾಧನೆ ಈ ಮೂರು ದಿನಗಳು ಅತಿ ಮಹತ್ವವಾಗಿವೆ.

 

ಆಗಸ್ಟ್ 22 ನೇ ಗುರುವಾರ : ಶ್ರೀ ಗುರುಸಾರ್ವಭೌಮರ ಉತ್ತರಾರಾಧನೆ ಪ್ರಾತ: 11.೦೦ ಗಂಟೆಗೆ ಶ್ರೀ ಗುರುಸಾರ್ವಭೌಮರ ಉತ್ತರಾರಾಧನೆ ಪ್ರಯುಕ್ತ ಮಹಾರಥೋತ್ಸವವು ಚಿತ್ರದುರ್ಗದ ರಾಜಬೀದಿಗಳಲ್ಲಿ ವಿವಿಧ ಭಜನಾಮಂಡಳಿಗಳು ಹಾಗೂ ಶ್ರೀ ಗುರುಸಾರ್ವಭೌಮರ ಭಕ್ತರೊಂದಿಗೆ ಜರುಗುವುದು.

ಆಗಸ್ಟ್ 23 ನೇ ಶುಕ್ರವಾರ : ಶ್ರೀ ಸುಜ್ಞಾನೇಂದ್ರತೀರ್ಥರ ಆರಾಧನೆ, ಪವಮಾನ ಹೋಮ, ಸರ್ವಸಮರ್ಪಣೋತ್ಸವ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ ನಿರ್ಮಾಲ್ಯ ಅಷ್ಟೋತ್ತರ ಸಹಿತ ಫಲಪಂಚಾಮೃತ ಅಭಿಷೇಕ ಉತ್ಸವರಾಯರ ಪಾದಪೂಜೆ, ಕನಕಾಭಿಷೇಕ ನೈವೇದ್ಯ, ಅಲಂಕಾರ ಪಂಕ್ತಿ, ಹಸ್ತೋದಕ, ಮಹಾಮಂಗಳಾರತಿ, ತೀರ್ಥಪ್ರಸಾದ  ಭಜನಾ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮ ರಜತ ರಥೋತ್ಸವ, ಸ್ವಸ್ತಿವಾಚನ, ಅಷ್ಟಾವಧಾನ, ಮಹಾ ಮಂಗಳಾರತಿ. ಕಾರ್ಯಕ್ರಮ ನಡೆಯಿತು.  ಬೆಳ್ಳಿಗೆ ಶ್ರೀ ಸಪ್ತಗಿರಿ ಭಜನಾ ಮಂಡಳಿಯವರಿಂದ ಭಜನೆ ಸಂಜೆ ಸುಜೀತ್ ಕುಲಕರ್ಣಿ ಇವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.

Advertisement
Tags :
357th Aradhana MahotsavabengaluruchitradurgaExuberancesuddionesuddione newsಚಿತ್ರದುರ್ಗಬೆಂಗಳೂರುರಾಯರ 357ನೇ ಆರಾಧನಾ ಮಹೋತ್ಸವವಿಜೃಂಭಣೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article