ನೇತ್ರದಾನ ಮಾನವತ್ವದ ಶ್ರೇಷ್ಠ ಸೇವೆ : ಡಾ. ರವೀಂದ್ರ
ಚಿತ್ರದುರ್ಗ: ಸೆ.01 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ವಿಭಾಗ, ಚಿತ್ರದುರ್ಗ ಇವರ ವತಿಯಿಂದ 39ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಕಾರ್ಯಕ್ರಮವನ್ನು ಜಿಲ್ಲಾದ್ಯಂತ 2024ರ ಆಗಸ್ಟ್ 25 ರಿಂದ ಸೆಪ್ಟೆಂಬರ್ 8 ರವರೆಗೆ ಹಮ್ಮಿಕೊಳ್ಳಲಾಗಿದೆ.
ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಇತ್ತೀಚೆಗೆ ನಡೆಸಲಾದ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಅವರು ಮಾತನಾಡಿ "ಒಬ್ಬ ವ್ಯಕ್ತಿಯು ದಾನ ಮಾಡಿದ ನೇತ್ರಗಳು ಇಬ್ಬರು ಕಾರ್ನಿಯಾ ಅಂಧರಿಗೆ ದೃಷ್ಟಿ ನೀಡುತ್ತವೆ. ಪ್ರತಿ ವರ್ಷ ಸರಾಸರಿ 5600 ನೇತ್ರದಾನಗಳಾಗುತ್ತಿವೆ. ಅಂದಾಜು 1.25 ಲಕ್ಷ ಜನರು ಕಾರ್ನಿಯಾ ಸಂಬಂಧಿತ ಅಂಧತ್ವದಿಂದ ಬಳಲುತ್ತಿದ್ದು, ದಾನಕ್ಕಾಗಿ ಕಾಯುತ್ತಿರುತ್ತಾರೆ. ವಿಶ್ವದಾದ್ಯಂತ ಧಾರ್ಮಿಕ ನಾಯಕರು ನೇತ್ರದಾನಕ್ಕೆ ಬೆಂಬಲ ಸೂಚಿಸಿದ್ದು, ನೇತ್ರದಾನ ಅತ್ಯುತ್ತಮ ಮಾನವೀಯ ಸೇವೆ" ಎಂದು ಅಭಿಪ್ರಾಯ ಪಟ್ಟರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಂದತ್ವ ನಿವಾರಣೆ ಅಧಿಕಾರಿಗಳಾದ ಡಾ. ನಾಗರಾಜ್, ನೇತ್ರ ತಜ್ಞರಾದ
ಡಾ. ಶಿಲ್ಪಾ ಹಾಗೂ ಡಾ. ಪ್ರದೀಪ್, ಅರೋಗ್ಯ ಶಿಕ್ಷಣ ಅಧಿಕಾರಿಗಳಾದ ಗೌರಮ್ಮ,, ಜಾನಕೀ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.