For the best experience, open
https://m.suddione.com
on your mobile browser.
Advertisement

ಅಕ್ರಮ ಮಧ್ಯೆ ಮಾರಾಟ ತಡೆಗಟ್ಟುವಂತೆ ರೈತ ಸಂಘಟನೆ ಹಾಗೂ ಗ್ರಾಮಸ್ಥರ ಒತ್ತಾಯ

06:57 PM Jan 02, 2024 IST | suddionenews
ಅಕ್ರಮ ಮಧ್ಯೆ ಮಾರಾಟ ತಡೆಗಟ್ಟುವಂತೆ ರೈತ ಸಂಘಟನೆ ಹಾಗೂ ಗ್ರಾಮಸ್ಥರ ಒತ್ತಾಯ
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 02 : ತಾಲೂಕಿನ ಕಾಲುವೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗೌಡರಹಟ್ಟಿ, ಯಾದಲಗಟ್ಟೆ, ಕ್ಯಾತಗೊಂಡನಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ಹೆಚ್ಚಾಗಿದ್ದು ಇದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ ಈ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಇನ್ಸ್ಪೆಕ್ಟರ್ ನಾಗರಾಜ್ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.

Advertisement

ಗ್ರಾಮದಲ್ಲಿ ಯುವಕರು, ಕಾಲೇಜು ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗಿದ್ದಾರೆ. ಕೂಲಿ ಮಾಡಿ ದುಡಿದ ಹಣವನ್ನು ಮದ್ಯ ಸೇವನೆ ಮಾಡಲು ಹಾಳು ಮಾಡುತ್ತಿದ್ದಾರೆ.

ಮಧ್ಯ ಸೇವನೆ ಮಾಡಿದ ನಂತರ ಹೆಂಡತಿಯ ಮೇಲೆ ಹಲ್ಲೆ ಮಾಡುವುದು, ಗ್ರಾಮದಲ್ಲಿ ಅಶಾಂತಿ ವಾತಾವರಣವನ್ನು ಉಂಟುಮಾಡುವುದು ಮಾಡುತ್ತಿದ್ದಾರೆ. ಈ ರೀತಿ ಮಧ್ಯ ಸೇವನೆಯಿಂದ  ಆರೋಗ್ಯ ಹಾಳಾಗುತ್ತದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಪಿ ಭೂತಯ್ಯ ತಿಳಿಸಿದರು.

ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕದಿದ್ದರೆ ಅಬಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಗ್ರಾಮಸ್ಥರು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಕೆ. ಪಿ. ಭೂತಯ್ಯ, ತಿಪ್ಪಕ್ಕ,  ಪಾಲಯ್ಯ, ತಿಪ್ಪೇಸ್ವಾಮಿ ಹಾಗೂ ಮತ್ತಿತರರು ಇದ್ದರು.

Advertisement
Tags :
Advertisement