Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪಿಡಿಒ ವರ್ತನೆಗೆ ಬೇಸತ್ತು ಸಾಮೂಹಿಕ ರಾಜೀನಾಮೆ ಸಲ್ಲಿಸಿದ ಸದಸ್ಯರು..!

11:13 AM Mar 01, 2024 IST | suddionenews
Advertisement

ಸುದ್ದಿಒನ್, ಹಿರಿಯೂರು : ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮಪಂಚಾಯಿತಿ ಪಿಡಿಓ ಚಂದ್ರಕಲಾ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಹಾಗೂ ಸಾರ್ವಜನಿಕಕರ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

Advertisement

ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಸಮಸ್ಯೆ ಬಗೆಹರಿಸುವಲ್ಲಿ ಪಿಡಿಓ ವಿಫಲರಾಗಿದ್ದಾರೆ. ಜೊತೆಗೆ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ನಿಂತು ಹೋಗಿದ್ದು, ಗ್ರಾಮಗಳಲ್ಲಿ ತೊಂದರೆ ಉಂಟಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ದೂರಿದರು. ಗ್ರಾಮ ಪಂಚಾಯಿತಿಯಲ್ಲಿ 15 ಜನ ಸದಸ್ಯರಿದ್ದಾರೆ. ಉಪಾಧ್ಯಕ್ಷರು ಸೇರಿ 11 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷರು ಕೂಡ ರಾಜೀನಾಮೆ ನೀಡಲಿದ್ದು, ಉಳಿದ ಮೂರು ಜನರು ಕಾರಣಗಳಿಂದ ಬೇರೆಡೆಯಿದ್ದು, ಒಂದೆರಡು ದಿನಗಳಲ್ಲಿ ಅವರು ರಾಜೀನಾಮೆ ನೀಡಲಿದ್ದಾರೆ.

ರಾಜೀನಾಮೆ ಕುರಿತು ಪಂಚಾಯಿತಿ ಸದಸ್ಯ ಕೆ. ಬಸವರಾಜ್ ಮಾತನಾಡಿ ಪಂಚಾಯಿತಿ ಪಿಡಿಒ ಅವರು ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಗೌರವ ಕೊಡದೇ ಅಗೌರವ ತೋರಿಸುತ್ತಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಈಸ್ವತ್ತು ಮಾಡಿಕೊಡುತ್ತಿಲ್ಲ.

Advertisement

 

ವಸತಿ ಯೋಜನೆಯ ಮನೆಗಳಿಗೆ ಹಣ ಬಿಲ್ ಪಾಸ್ ಮಾಡುತ್ತಿಲ್ಲ, ನರೇಗಾ ಯೋಜನೆಯಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಹಾಗೂ ಸದಸ್ಯರ ಪೋನ್ ಸಂಪರ್ಕಕ್ಕೆ ಸಿಗದೇ ನಿರ್ಲಕ್ಷ್ಯ ತೋರುತ್ತಿದ್ದಾರೆ. ಗ್ರಾಪಂತಿಗೆ ಸರಿಯಾದ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ.

 

ಎನ್.ಆರ್. ಜಿ. ಕಾಮಗಾರಿಯಲ್ಲಿ ರೈತರ ಸಾಮಗ್ರಿಗಳ ವೆಚ್ಚದ ಬಿಲ್ ಮಾಡದೇ ಇರುವುದು. ಇಲ್ಲದೆ ಪ್ರಮುಖವಾಗಿ ಕುಡಿಯುವ ನೀರಿನ ಸಾಮಗ್ರಿಗಳು ಹಾಗೂ ವಿದ್ಯುತ್ ಬಲ್ಬ್ ಗಳು ಅಂಗಡಿಯಲ್ಲಿ ಖರೀದಿ ಮಾಡಿದ್ದು, ಅಂಗಡಿ ಮಾಲೀಕರಿಗೆ ಬಿಲ್ ಕೊಡದೆ ಸತಾಯಿಸುತ್ತಿದ್ದಾರೆ. ಈಗೆ ಅನೇಕ ಸಮಸ್ಯೆಗಳಿವೆ. ಆಡಳಿತದಲ್ಲಿ ಅಸಹಾಯಕತೆ ತೋರಿರುವ ಪಿಡಿಓ ಚಂದ್ರಕಲಾ ಅವರ‌ ನಡುವಳಿಕೆಗೆ ಬೇಸತ್ತು ರಾಜೀನಾಮೆ ನೀಡಿದ್ದೇವೆ ಎಂದು ತಿಳಿಸಿದರು.

Advertisement
Tags :
behaviorbengaluruchitradurgafed upmass resignationmembersPDOSubmittedsuddionesuddione newsಚಿತ್ರದುರ್ಗಪಿಡಿಒಬೆಂಗಳೂರುಬೇಸತ್ತುವರ್ತನೆಸದಸ್ಯರುಸಾಮೂಹಿಕ ರಾಜೀನಾಮೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article