For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಬಾಲ್ಯ ವಿವಾಹ ಪ್ರಕರಣ ದಾಖಲು

06:05 PM Sep 05, 2024 IST | suddionenews
ಚಿತ್ರದುರ್ಗ   ಬಾಲ್ಯ ವಿವಾಹ ಪ್ರಕರಣ ದಾಖಲು
Advertisement



ಚಿತ್ರದುರ್ಗ. 05: ಚಳ್ಳಕೆರೆ ತಾಲ್ಲೂಕಿನ ಕೆರೆಹಿಂದಲಹಟ್ಟಿ ಗ್ರಾಮದ ಗಂಟೆ ಮಾರಮ್ಮನ ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಚಿಕ್ಕಮ್ಮನಹಳ್ಳಿಯ ಬಾಬು.ಸಿ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಿಸಲಾಗಿದೆ.

Advertisement
Advertisement

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಗಮನಕ್ಕೆ ಬಾಲ್ಯ ವಿವಾಹದ ಕುರಿತು ಮಾಹಿತಿ ಬಂದಿತ್ತು. ಕೂಡಲೇ ಆಗಸ್ಟ್ 27 ರಂದು ತಳಕು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆ-2006ರ ಪ್ರಕಾರ ಚಳ್ಳಕೆರೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಳಕು ವೃತ್ತದ ಮಹಿಳಾ ಮೇಲ್ವಿಚಾರಕಿ ಎಫ್.ಐ.ಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

Advertisement
Tags :
Advertisement