ಫೆಬ್ರವರಿ 26 ರಂದು ಚಿತ್ರದುರ್ಗ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ
ಚಿತ್ರದುರ್ಗ. ಫೆ.23: ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ ನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಇದೇ ಫೆ.26ರಂದು ಬೆಳಿಗ್ಗೆ 10.45ಕ್ಕೆ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು ವಿಭಾಗದಲ್ಲಿ 12 ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಹಾಗೂ 13 ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ಕಾಮಗಾರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆ.26ರಂದು ಮಧ್ಯಾಹ್ನ 12.30ಕ್ಕೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸುವರು. ಇದೇ ಸಂದರ್ಭದಲ್ಲಿ ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ ನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದ ಎ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಗಣ್ಯರು ನಗರದ ರೈಲ್ವೆ ನಿಲ್ದಾಣದಲ್ಲಿ ಉಪಸ್ಥಿತರಿದ್ದು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸೌತ್ ವೆಸ್ಟರ್ನ್ ರೈಲ್ವೆ ಮೈಸೂರು ವಿಭಾಗದ ಸೀನಿಯರ್ ಡಿವಿಜಿನಲ್ ಕಮರ್ಷಿಯಲ್ ಮ್ಯಾನೇಜರ್ ಜೆ.ಲೋಹಿತೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.