For the best experience, open
https://m.suddione.com
on your mobile browser.
Advertisement

ಮನೆ ಬಾಗಿಲಿಗೆ ಉಚಿತ ಆರೋಗ್ಯ ತಪಾಸಣೆ : ಡಾ.ರವೀಂದ್ರ

05:37 PM Nov 15, 2024 IST | suddionenews
ಮನೆ ಬಾಗಿಲಿಗೆ ಉಚಿತ ಆರೋಗ್ಯ ತಪಾಸಣೆ   ಡಾ ರವೀಂದ್ರ
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ಉಚಿತ ಆರೋಗ್ಯ ತಪಾಸಣೆ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆಯನ್ನು ಒದಗಿಸಲಾಗುವುದೆಂದು ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕರಾದ ಡಾ.ರವೀಂದ್ರ ತಿಳಿಸಿದರು.

Advertisement

ನಿಸರ್ಗ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ಗುಡ್ಡದರಂಗವ್ವನಹಳ್ಳಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

Advertisement

ಬದಲಾದ ಆಹಾರ ಪದ್ದತಿ ಹಾಗೂ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುವುದು ಸಹಜ. ಎಲ್ಲರೂ ಜಿಲ್ಲಾಸ್ಪತ್ರೆ ಹಾಗೂ ಹೈಟೆಕ್ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವುದು ಕಷ್ಟವಾಗಿರುವುದರಿಂದ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡು ಹಳ್ಳಿಗಾಡಿನ ಜನ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕೆಂದು ಮನವಿ ಮಾಡಿದರು.

ತಾಲ್ಲೂಕು ವೈದ್ಯಾಧಿಕಾರಿ ಗಿರೀಶ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರುಗಳನ್ನು ಭೇಟಿಯಾಗಿ ಚಿಕಿತ್ಸೆ ಪಡೆಯುವುದು ಗ್ರಾಮೀಣ ಪ್ರದೇಶದ ಜನರಿಗೆ ಕಷ್ಟವಾಗಬಹುದು. ಅದಕ್ಕಾಗಿ ಹಳ್ಳಿಗಾಡಿನಲ್ಲಿ ಆಯೋಜಿಸಲಾಗಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಪ್ರಯೋಜನ ಪಡೆದುಕೊಂಡು ಎಲ್ಲಾ ಬಗೆಯ ಕಾಯಿಲೆಗಳಿಗೆ ಚಿಕಿತ್ಸೆ ಹಾಗೂ ವೈದ್ಯರುಗಳಿಂದ ಸಲಹೆಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ನಿಸರ್ಗ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ದುರುಗೇಶ್, ಕಾರ್ಯದರ್ಶಿ ನಾಗರಾಜ್, ಪದಾಧಿಕಾರಿಗಳಾದ ಶ್ರೀನಾಥ್, ಶಶಿಕುಮಾರ್, ರಾಘವೇಂದ್ರ, ಮನು, ತಜ್ಞ ವೈದ್ಯರುಗಳಾದ

ಗೀತಾಂಜಲಿ, ವಾಣಿ, ಪ್ರಜ್ವಲ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ತುರುವೇಶ್, ಸದಸ್ಯರು ಹಾಗೂ ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆಯರು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಹಾಗೂ ಜಾಂಡಿಸ್ ಕಾಯಿಲೆಗಳ ತಪಾಸಣೆ ನಡೆಸಲಾಯಿತು. ನೂರೈವತ್ತಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

Advertisement
Tags :
Advertisement