Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಕ್ಟೋಬರ್ 28 ರವರೆಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಅಭಿಯಾನ : ಡಾ.ಎಸ್.ಎನ್.ಹರೀಶ್

05:43 PM Oct 03, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಚಿತ್ರದುರ್ಗ ಪಶುವೈದ್ಯಕೀಯ ಪಾಲಿಕ್ಲಿನಿಕ್ ವತಿಯಿಂದ ಸೆ.28 ರಿಂದ ಅಕ್ಟೋಬರ್ 28 ರವರೆಗೆ ಒಂದು ತಿಂಗಳ ಕಾಲ ಉಚಿತ ರೇಬಿಸ್ ನಿರೋಧಕ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

Advertisement

ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕುಗಳಿಗೆ ಪಶುವೈದ್ಯಕೀಯ ಪಾಲಿಕ್ಲಿನಿಕ್‍ನಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ. 2 ರಿಂದ ಸಂಜೆ ನಾಲ್ಕು ಗಂಟೆಯವರೆಗೆ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ಎಲ್ಲಾ ಪಶು ಆಸ್ಪತ್ರೆಗಳಲ್ಲಿ ರೇಬಿಸ್ ನಿರೋಧಕ ಲಸಿಕಾ ಅಭಿಯಾನವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ.ಎಸ್.ಎನ್.ಹರೀಶ್ ಮನವಿ ಮಾಡಿದ್ದಾರೆ.

ಮಾರಾಟ ಕೇಂದ್ರಗಳಿಗೆ ಪರವಾನಗಿ :
ಕುಕ್ಕುಟ ಮತ್ತು ಪಶು ಆಹಾರ ಉತ್ಪಾದನೆ ಮತ್ತು ಮಾರಾಟ ಕೇಂದ್ರಗಳಿಗೆ ಪರವಾನಗಿ (ಲೈಸನ್ಸ್) ಪಡೆದುಕೊಳ್ಳಬಹುದಾಗಿದೆ ಎಂದು ಪಶು ವೈದ್ಯಕೀಯ ಪಾಲಿಕ್ಲಿನಿಕ್ ಪರವಾನಗಿ ಪ್ರಾಧಿಕಾರ ಮತ್ತು ಉಪನಿರ್ದೇಶಕ ಡಾ.ಎನ್,ಎಸ್.ಹರೀಶ್ ತಿಳಿಸಿದ್ದಾರೆ.

Advertisement
Tags :
bengaluruchitradurgaDr.S.N.HarishFree Rabies Vaccinationsuddionesuddione newsಚಿತ್ರದುರ್ಗಡಾ.ಎಸ್.ಎನ್.ಹರೀಶ್ಬೆಂಗಳೂರುರೇಬಿಸ್ ನಿರೋಧಕ ಲಸಿಕಾ ಅಭಿಯಾನಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article